ರಾಯಚೂರು : ಶಸ್ತ್ರ ಚಿಕಿತ್ಸೆ ಬಳಿಕ ಚೇತರಿಸಿಕೊಳ್ಳುತ್ತಿರುವ ಕರುನಾಡ ಚಕ್ರವರ್ತಿ ಡಾ.ಶಿವರಾಜಕುಮಾರ್ ಅವರು ಕುಟುಂಬ ಸಮೇತ ಇಂದು ಶ್ರೀ ಕ್ಷೇತ್ರ ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮಿಗಳವರ ದರ್ಶನ ಪಡೆದರು. ನಂತರ ಹಿ.ಶ್ರೀ.ಸ್ವಾಮಿಗಳು ಶಿವಣ್ಣ ಅವರಿಗೆ ಹಾಗೂ ಅವರ ಕುಟುಂಬಕ್ಕೆ ಅನುಗ್ರಹ ಫಲಮಂತ್ರಾಕ್ಷತೆ, ಶೇಷವಸ್ತ್ರ, ಸ್ಮರಣಿಕೆ ನೀಡಿ ಆಶೀರ್ವದಿಸಿದರು.
ಭೇಟಿಯ ಸಂದರ್ಭದಲ್ಲಿ, ಡಾ. ಶಿವರಾಜಕುಮಾರ್ ಅವರು ತಮ್ಮ ತಂದೆ ಡಾ. ರಾಜ್ಕುಮಾರ್ ಅವರೊಂದಿಗೆ ಚಲನಚಿತ್ರದ ಚಿತ್ರೀಕರಣದ ಸಮಯದಲ್ಲಿ ಶ್ರೀ ಮಠದಲ್ಲಿ ಉಳಿದುಕೊಂಡಿದ್ದ ನೆನಪುಗಳನ್ನು ಪ್ರೀತಿಯಿಂದ ನೆನಪಿಸಿಕೊಂಡರು. ಶ್ರೀಮಠವು ತಮ್ಮ ಎರಡನೇ ಮನೆಯಂತೆ ಭಾಸವಾಗುತ್ತಿದೆ ಎಂದು ಹೇಳಿದರು.
ಅಮೇರಿಕಾದಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರುವ ಶಿವಣ್ಣ ಇದೀಗ ಸಂಪೂರ್ಣ ಗುಣಮುಖರಾಗಿದ್ದಾರೆ. ಅಮೇರಿಕಾದಿಂದ ಬಳಿಕ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದ ಇದೀಗ ಮಂತ್ರಾಲಯದಲ್ಲಿ ರಾಯರ ಆಶೀರ್ವಾದ ಪಡೆದರು. ಅಮೇರಿಕಾಗೆ ತೆರಳುವ ಮುನ್ನ ತಿರುಪತಿಯಲ್ಲಿ ತಿಮ್ಮಪ್ಪನ ದರ್ಶನ ಮಾಡಿ, ಕುಟುಂಬ ಸಮೇತ ಮುಡಿ ಕೊಟ್ಟಿದ್ದರು.