ಸ್ಯಾಂಡಲ್ವುಡ್ ನಟಿ ರಾಧಿಕಾ ಪಂಡಿತ್ ಮಾರ್ಚ್ 7ರಂದು ಅಭಿಮಾನಿಗಳ ಜೊತೆ ಬರ್ತ್ಡೇ ಸೆಲೆಬ್ರೇಟ್ ಮಾಡಿದ್ದರು. ಅದಾದ ಬಳಿಕ ಕುಟುಂಬದಸ್ಥರ ಜೊತೆ ಬರ್ತಡೇ ಪಾರ್ಟಿ ಮಾಡಿದ್ದು ಇದೀಗ ಪಾರ್ಟಿಯ ವಿಡಿಯೋವನ್ನು ನಟಿ ಶೇರ್ ಮಾಡಿದ್ದಾರೆ.
ಮಾರ್ಚ್ 7, ನನ್ನ ಜೀವನದಲ್ಲಿ ಇಂತಹ ವ್ಯಕ್ತಿಗಳನ್ನು ಪಡೆದಿರೋದು ನನಗೆ ಸಿಕ್ಕ ಆಶೀರ್ವಾದ ಎಂದು ನಟಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಕುಟುಂಬದ ಜೊತೆ ಹುಟ್ಟುಹಬ್ಬ ಆಚರಿಸಿದ ವಿಡಿಯೋವನ್ನು ರಾಧಿಕಾ ಶೇರ್ ಮಾಡಿದ್ದಾರೆ.
ಪತ್ನಿಯ ಹುಟ್ಟುಹಬ್ಬವನ್ನು ಯಶ್ ಅದ್ದೂರಿಯಾಗಿ ಸೆಲೆಬ್ರೇಟ್ ಮಾಡಿದ್ದಾರೆ. ಕಡಲ ತೀರದಲ್ಲಿ ಪತಿ ಯಶ್ ಮತ್ತು ಕುಟುಂಬದ ಜೊತೆ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.
ಬರ್ತಡೇ ಸ್ಟೇಜ್ನಲ್ಲಿ ಇಬ್ಬರೂ ಲೈಟ್ ಬಣ್ಣದ ಡ್ರೆಸ್ನಲ್ಲಿ ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ. ರಾಧಿಕಾ ಶೇರ್ ಮಾಡಿರುವ ವಿಡಿಯೋದಲ್ಲಿ ಯಶ್ನ ಅಪ್ಪಿಕೊಂಡು ಕೇಕ್ ತಿನ್ನಿಸಿದ್ದಾರೆ. ಮದುವೆಯ ಬಳಿಕ ರಾಧಿಕಾ ಪಂಡಿತ್ ಸಿನಿಮಾ ರಂಗದಿಂಧ ದೂರವಿದ್ದು ಮನೆ, ಮಕ್ಕಳು, ಸಂಸಾರ ಎಂದು ಬ್ಯುಸಿಯಾಗಿದ್ದಾರೆ. ಇಂದಿಗೂ ಲಕ್ಷಾಂತರ ಅಭಿಮಾನಿಗಳು ರಾಧಿಕಾ ಮತ್ತೆ ಸಿನಿಮಾ ರಂಗಕ್ಕೆ ಕಂಬ್ಯಾಕ್ ಮಾಡುವುದನ್ನು ಕಾಯ್ತಿದ್ದಾರೆ.