ರಾಕಿಂಗ್ ಸ್ಟಾರ್ ಯಶ್ , ರಾಧಿಕಾ ಪಂಡಿತ್ ದಂಪತಿ ಮಕ್ಕಳು ಹಾಗೂ ಕುಟುಂಬಸ್ಥರೊಂದಿಗೆ ಭಟ್ಕಳ ತಾಲ್ಲೂಕಿನ ಖ್ಯಾತ ಚಿತ್ರಾಪುರ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಯ ಆಶೀರ್ವಾದ ಪಡೆದರು.
ಮಠದ ಸದ್ಯೋಜಾತ ಶಂಕರಾಶ್ರಮ ಸ್ವಾಮೀಜಿ ಅವರ ದರ್ಶನವನ್ನು ಪಡೆದ ಯಶ್ ದಂಪತಿ ಸುಮಾರು ಎರಡು ಗಂಟೆಗಳಿಗೂ ಹೆಚ್ಚು ಕಾಲ ಸ್ವಾಮೀಜಿಯವರೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮಠದ ಆಡಳಿತಾಧಿಕಾರಿ, ಸಿಬ್ಬಂದಿ ಹಾಜರಿದ್ದರು.
ಯಶ್ ಬಂದಿರುವ ಸುದ್ದಿ ತಿಳಿದ ನೂರಾರು ಅಭಿಮಾನಿಗಳು ಚಿತ್ರಾಪುರ ಮಠದ ಸುತ್ತಲೂ ನೆರೆದಿದ್ದರು. ಅಭಿಮಾನಿಗಳನ್ನು ಕಂಡ ಯಶ್ ಸಂತಸದಿಂದ ಅವರತ್ತ ಕೈಬೀಸಿದರು.
ಮಠದ ಅತಿಥಿಗೃಹದಲ್ಲಿಯೇ ಯಶ್ ಕುಟುಂಬ ವಾಸ್ತವ್ಯ ಹೂಡಿದ್ದು, ಶುಕ್ರವಾರ ಬೆಳಿಗ್ಗೆ ಇಲ್ಲಿಂದ ಬೆಂಗಳೂರಿಗೆ ಹೊರಟರು.