‘ನಾಗಿಣಿ’ ಖ್ಯಾತಿಯ ನಟಿ ದೀಪಿಕಾ ದಾಸ್ ಸದ್ದಿಲ್ಲದೆ ಗೋವಾದಲ್ಲಿ ಮದುವೆಯಾಗಿದ್ದಾರೆ. ಮದುವೆಯಾಗಿರುವ ಫೋಟೋವನ್ನು ಸೋಷಿಯಲ್ ಮೀಡಯಾದಲ್ಲಿ ಹಂಚಿಕೊಳ್ಳುವ ಮೂಲಕ ಎಲ್ಲರಿಗೂ ಶಾಕ್ ನೀಡಿದ್ದಾರೆ.
ಸ್ಯಾಂಡಲ್ವುಡ್ ನಟಿ, ಬಿಗ್ಬಾಸ್ ಖ್ಯಾತಿಯ ದೀಪಿಕಾ ದಾಸ್ ಗೋವಾದ ಕಡಲ ತೀರದಲ್ಲಿ ಮದುವೆಯಾಗಿದ್ದಾರೆ. ಬೀಚ್ ಸೈಡ್ ವೆಡ್ಡಿಂಗ್ ಫೊಟೋ ಶೇರ್ ಮಾಡಿ ಮದುವೆಯಾಗಿರುವುದನ್ನು ತಿಳಿಸಿದ್ದಾರೆ.
ನಟಿಯ ದಿಢೀರ್ ಮದುವೆ ಫೋಟೋಸ್ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ. ಇದು ಮದುವೆಯಾ? ಅಥವಾ ಆ್ಯಡ್ ಶೂಟಿಂಗ್ ಫೋಟೋಗಳಾ ಎಂದು ಕನ್ಫ್ಯೂಸ್ ಆಗಿದ್ದಾರೆ. ಆದರೆ ಸಾಕಷ್ಟು ಮಂದಿ ಇದು ರಿಯಲ್ ಮದುವೆ ಎನ್ನುತ್ತಿದ್ದಾರೆ.
ಮೂರು ಫೋಟೋಸ್ ಶೇರ್ ಮಾಡಿದ ದೀಪಿಕಾ ದಾಸ್ ಅವರು ಮಿಸ್ಟರ್ & ಮಿಸಸ್ ಡಿ ಎಂದು ಬರೆದು ರೆಡ್ ಹಾರ್ಟ್ ಎಮೋಜಿಯನ್ನು ಹಾಕಿದ್ದಾರೆ. ಫೋಟೋ ನೋಡಿದ ನೆಟ್ಟಿಗರು ಮದುವೆ ಆಯ್ತಾ ಎಂದು ಪ್ರಶ್ನೆ ಮಾಡಿದ್ದಾರೆ.
ದೀಪಿಕಾ ದಾಸ್ ಬಿಳಿ ಬಣ್ಣದ ಕೇಸರಿ ಅಂಚಿನ ಸೀರೆಯನ್ನು ಉಟ್ಟಿದ್ದರು. ಆಕರ್ಷಕವಾದ ವರಮಾಲೆ ಧರಿಸಿ ಸುಂದರವಾಗಿ ವಧುವಾಗಿ ಕಂಗೊಳಿಸಿದ್ದಾರೆ. ವರನ ಕೈ ಹಿಡಿದುಕೊಂಡು ಖುಷಿಯಿಂದ ಹೆಜ್ಜೆ ಹಾಕುತ್ತಿದ್ದ ದೃಶ್ಯ ಫೋಟೋದಲ್ಲಿ ಸೆರೆಯಾಗಿದೆ.
ಸಾಹಸಮಯ ಜಗತ್ತಿಗೆ ಸ್ವಾಗತ ಎಂದು ನಟಿ ಬರೆದಿದ್ದಾರೆ. ದೀಪಿಕಾ ಅವರು ಕಮೆಂಟ್ ಬಾಕ್ಸ್ ಆಫ್ ಮಾಡಿಟ್ಟಿದ್ದು ಸದ್ಯ ಅಭಿಮಾನಿಗಳ ಪ್ರಶ್ನೆಗಳನ್ನು ತಪ್ಪಿಸಲು ಹೀಗೆ ಮಾಡಿದ್ದಾರೆ ಎನ್ನಿಸುತ್ತಿದೆ.
ದುಬೈನಲ್ಲಿ ನೆಲೆಸಿರುವ ಕರ್ನಾಟಕ ಮೂಲದ ಉದ್ಯಮಿ ಜೊತೆ ದೀಪಿಕಾ ದಾಸ್ ಮದುವೆ ಆಗಿದ್ದು, ಗೋವಾನಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್ ನಡೆದಿದೆ.
ಗೋವಾದ ಕಡಲ ತಡಿಯಲ್ಲಿ ಖಾಸಗಿಯಾಗಿ ವಿವಾಹ ಕಾರ್ಯಕ್ರಮ ನಡೆದಿದ್ದು, ವಧು-ವರರ ಕುಟುಂಬ ಸದಸ್ಯರು ಮಾತ್ರ ಮದುವೆಯಲ್ಲಿ ಭಾಗಿಯಾಗಿದ್ದರು.
ಬಿಗ್ ಬಾಸ್ ಮನೆಯಲ್ಲಿ ಟಫ್ ಕಾಂಪಿಟೇಟರ್ ಆಗಿದ್ದ ದೀಪಿಕಾ ಬಿಗ್ ಬಾಸ್ ಮನೆಯಿಂದ ಹೊರ ಬಂದ ಬಳಿಕ ಸಿನಿಮಾಗಳ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ.
ದೀಪಿಕಾ ದಾಸ್ ಇತ್ತೀಚೆಗೆ ಸಾಕಷ್ಟು ಪ್ರವಾಸ, ಮೋಜುಗಳಲ್ಲಿ ತೊಡಗಿಕೊಂಡಿದ್ದರು, ಇನ್ಸ್ಟಾಗ್ರಾಂನಲ್ಲಿ ಪ್ರವಾಸದ ಚಿತ್ರಗಳನ್ನು ಹಂಚಿಕೊಳ್ಳುತ್ತಿದ್ದರು. ಇದೀಗ ತಮ್ಮ ಮದುವೆಯ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ದೀಪಿಕಾ ದಾಸ್, ‘ಸಾಹಸಮಯ ಪ್ರಯಾಣಕ್ಕೆ ಸ್ವಾಗತ’ ಎಂದು ಬರೆದುಕೊಂಡಿದ್ದಾರೆ.