ಮಹಾರಾಷ್ಟ್ರ: ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ನೀಡಿದ್ದ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಕಂಗನಾ ರಣಾವತ್ ಇಂದು ಮುಂಬೈನ ಖಾರ್ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ಕಂಗನಾ ರಣಾವತ್ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಇನ್‌ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದರು. ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸಿದ ರೈತರಿಗೆ ಪ್ರತ್ಯೇಕತಾವಾದಿ ಗುಂಪಿನೊಂದಿಗೆ ಸಂಬಂಧ ಇದೆ ಎಂದು ಆರೋಪಿಸಿದ್ದರು.
ಇದರಿಂದಾಗಿ ನಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಕಂಗನಾ ಇಂದು ಪೊಲೀಸರ ಮುಂದೆ ಹಾಜರಾಗಿದ್ದಾರೆ.ಡಿಸೆಂಬರ್ 22 ರಂದು ಖಾರ್ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಕಂಗನಾ ಪರ ವಕೀಲರು ಮುಂಬೈ ಹೈಕೋರ್ಟ್‌ಗೆ ತಿಳಿಸಿದ್ದರು. ಬುಧವಾರ ಹಾಜರಾಗಲು ಸಾಧ್ಯವಾಗದ ಹಿನ್ನೆಲೆ ಬೇರೆ ದಿನ ನಿಗದಿ ಮಾಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆ ಇಂದು ವಿಚಾರಣೆಗೆ ಆಗಮಿಸಿದ್ದಾರೆ.
