‘ರಾಧಾ ರಮಣ’ (Radha Ramana) ನಟಿ ಕಾವ್ಯಾ ಗೌಡ (Kavya Gowda) ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಮನೆಗೆ ಮಹಾಲಕ್ಷ್ಮಿಯ ಆಗಮನವಾಗಿದೆ. ಹೆಣ್ಣು ಮಗುವಿಗೆ (Baby Girl) ನಟಿ ಜನ್ಮ ನೀಡಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಅಯೋಧ್ಯೆಯ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಜ.22ರಂದು ಅದ್ಧೂರಿಯಾಗಿ ನೆರವೇರಿದೆ. ಇದೇ ದಿನ ನಟಿ ಕಾವ್ಯಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇದು ಕಾವ್ಯಾ ಗೌಡ ಅವರ ಕುಟುಂಬದಲ್ಲಿ ಮತ್ತಷ್ಟು ಸಂತಸ ಹೆಚ್ಚಿಸಿದೆ.
ನಮ್ಮ ಮನೆಗೆ ಮುದ್ದಾದ ರಾಜಕುಮಾರಿಯ ಆಗಮನವಾಗಿದೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದು, ನಿಮ್ಮೆಲ್ಲರ ಶುಭಹಾರೈಕೆಗೆ ಧನ್ಯವಾದಗಳು ಎಂದು ಸೋಷಿಯಲ್ ಮೀಡಿಯಾ ಮೂಲಕ ನಟಿ ತಿಳಿಸಿದ್ದಾರೆ.