ಬಹುಭಾಷಾ ನಟಿ ಕೀರ್ತಿ ಸುರೇಶ್ ಅವರು ಬಾಲ್ಯದ ಗೆಳೆಯ ಆಂಟನಿ ತಟ್ಟಿಲ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಗೋವಾದಲ್ಲಿ ನಡೆದ ಡೆಸ್ಟಿನೇಷನ್ ವೆಡ್ಡಿಂಗ್ನಲ್ಲಿ ಆಂಟನಿ ತಟ್ಟಿಲ್ ಹಾಗೂ ಕೀರ್ತಿ ಸುರೇಶ್ ಅವರು ವಿವಾಹವಾಗಿದ್ದಾರೆ. ಅವರ ಮದುವೆಯ ಫೋಟೋಗಳು ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಅದ್ದೂರಿ ಮದುವೆ ಫೋಟೋಗಳನ್ನು ನಟಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಫೋಟೋಸ್ ನೋಡಿದ ಅಭಿಮಾನಿಗಳು ನವ ಜೋಡಿಗೆ ಶುಭ ಹಾರೈಸುತ್ತಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ನಟಿ ಕೀರ್ತಿ ಸುರೇಶ್ ಸೋಷಿಯಲ್ ಮೀಡಿಯಾದಲ್ಲಿ ಬಾಲ್ಯದ ಗೆಳೆಯನ ಜೊತೆಗೆ ನಿಂತುಕೊಂಡಿರೋ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದರು. ಆ ಫೋಟೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
ಕೆಲ ದಿನಗಳ ಹಿಂದೆಯಷ್ಟೇ ನಟಿ ಕೀರ್ತಿ ಸುರೇಶ್ ಸೋಷಿಯಲ್ ಮೀಡಿಯಾದಲ್ಲಿ ಬಾಲ್ಯದ ಗೆಳೆಯನ ಜೊತೆಗೆ ನಿಂತುಕೊಂಡಿರೋ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದರು. ಆ ಫೋಟೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
ಕುಟುಂಬಸ್ಥರ ಒಪ್ಪಿಗೆ ಮೆರೆಗೆ ನಟಿ ಕೀರ್ತಿ ಸುರೇಶ್ ಹಾಗೂ ಆಂಟೊನಿ ತಟ್ಟಿಲ್ ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದಾರೆ. ಗೋವಾದಲ್ಲಿ ನಡೆದ ಡೆಸ್ಟಿನೇಷನ್ ವೆಡ್ಡಿಂಗ್ನಲ್ಲಿ ಆಂಟನಿ ತಟ್ಟಿಲ್ ಕೀರ್ತಿ ಸುರೇಶ್ಗೆ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.
ಕೀರ್ತಿ ಸುರೇಶ್ ಅವರು ಕೆಂಪು ಬಣ್ಣದ ಸೀರೆಯಲ್ಲಿ ಮಿರ ಮಿರ ಮಿಂಚಿದ್ದಾರೆ. ಆ ಸೀರೆಯ ಜೊತೆಗೆ ಕೆಂಪು ಮುತ್ತಿನ ಗ್ರ್ಯಾಂಡ್ ನೆಕ್ಲೆಸ್ ಹಾಗೂ ಮ್ಯಾಚಿಂಗ್ ಇಯರಿಂಗ್ಸ್ ಧರಿಸಿದ್ದರು. ಗಂಡ ತಾಳಿ ಕಟ್ಟುತ್ತಿದ್ದಾಗ ನಟಿ ಕೀರ್ತಿ ಸುರೇಶ್ ಕಣ್ಣೀರು ಹಾಕಿದ್ದಾರೆ.
ಆಂಟೊನಿ ತಟ್ಟಿಲ್ ಮೂಲತಃ ಕೇರಳದ ಕೊಚ್ಚಿಯವರು. ದುಬೈನಲ್ಲಿ ಇವರದ್ದು ಹಲವು ಬ್ಯುಸಿನೆಸ್ ಇದೆ. ಹುಟ್ಟಿದ್ದು ಕೇರಳದಲ್ಲಾದ್ರೂ ಬೆಳೆದಿದ್ದು ಮಾತ್ರ ಚೆನ್ನೈನಲ್ಲೇ. ಸದ್ಯ ಆಂಟೊನಿ ತಟ್ಟಿಲ್ ದುಬೈನಲ್ಲೆ ನೆಲೆಸಿದ್ದಾರೆ ಎನ್ನಲಾಗುತ್ತಿದೆ.