ಬೆಂಗಳೂರು: ಸಮಾಜಮುಖಿ ಕೆಲಸಗಳ ಮೂಲಕ ಜನರ ಹೃದಯಕ್ಕೆ ಇನ್ನೂ ಹತ್ತಿರವಾಗುತ್ತಿರುವ ಹಿರಿಯ ನಟಿ ಲೀಲಾವತಿ ಅವರ ಕನಸಿನ ಆಸ್ಪತ್ರೆ ಇಂದು ಉದ್ಘಾಟನೆ ಆಗಲಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K.Sivakumar) ಅವರು ಪಶು ಆಸ್ಪತ್ರೆಯನ್ನು (Hospital) ಉದ್ಘಾಟಿಸಲಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ಲೀಲಾವತಿ ಅವರ ಆಸೆ ಇದಾಗಿದ್ದು, ಸರ್ಕಾರ ಅದಕ್ಕೆ ಸಮ್ಮತಿ ನೀಡಿದೆ.
ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಬಳಿ ಸುಸಜ್ಜಿತ ಪಶು ಆಸ್ಪತ್ರೆಯನ್ನು ತಮ್ಮ ಸ್ವಂತ ಖರ್ಚಿನಲ್ಲಿ ನಿರ್ಮಾಣ ಮಾಡಿರುವ ಲೀಲಾವತಿ ಮತ್ತು ವಿನೋದ್ ರಾಜ್, ಹಿಂದೆ ಜನರಿಗಾಗಿ ಮತ್ತೊಂದು ಆಸ್ಪತ್ರೆಯನ್ನೂ ನಿರ್ಮಿಸಿದ್ದರು. ಈ ಆಸ್ಪತ್ರೆಯನ್ನೂ ಸರಕಾರವೇ ನೋಡಿಕೊಳ್ಳುತ್ತಿದೆ. ಬೆಂಗಳೂರಿನ ಥಣಿಸಂದ್ರದ ಪಶು ಆಸ್ಪತ್ರೆಯನ್ನು ಸರಕಾರ ಸೋಲದೇವನಹಳ್ಳಿಗೆ ಶಿಪ್ಟ್ ಮಾಡಿ ಆದೇಶ ಪ್ರಕಟಿಸಿದೆ.