ಟಗರು ಪುಟ್ಟಿ ನಟಿ ಮಾನ್ವಿತಾ ಕಾಮತ್ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಮ್ಯೂಸಿಕ್ ಪ್ರೋಡ್ಯೂಸರ್ ಅರುಣ್ ಕುಮಾರ್ ಜೊತೆ ಮೇ 1ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.
ಮಾನ್ವಿತಾ ಮತ್ತು ಅರುಣ್ ಅವರದ್ದು ಅರೇಂಜ್ ಮ್ಯಾರೇಜ್ ಆಗಿದ್ದು, ಅಮ್ಮ ನೋಡಿದ ವರನನ್ನೇ ಮಾನ್ವಿತಾ ಮದುವೆಯಾಗುತ್ತಿದ್ದಾರೆ. ನನ್ನ ಮದುವೆ ನೋಡೋದು ಅಮ್ಮನ ಕನಸಾಗಿತ್ತು. ಅದರಂತೆಯೇ ಮದುವೆ ನೆರವೇರುತ್ತಿದೆ ಎನ್ನುತ್ತಾರೆ ಮಾನ್ವಿತಾ. ನನ್ನ ಅಮ್ಮ ನನ್ನ ಮದುವೆ ಪ್ರೊಫೈಲ್ ಅನ್ನು ನಮ್ಮ ಸಮುದಾಯದ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಹಂಚಿಕೊಳ್ಳುತ್ತಿದ್ದರು.
ಆಗ ಅರುಣ್ ತಾಯಿಗೆ ನಮ್ಮ ತಾಯಿ ನಿಧನದ ಬಗ್ಗೆ ತಿಳಿದಿರಲಿಲ್ಲ. ಅವರು ನಮ್ಮನ್ನು ತಲುಪಲು ತುಂಬ ಪ್ರಯತ್ನಿಸಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಕೊನೆಗೆ ಅವರು ನನ್ನ ನಂಬರ್ ಪಡೆದುಕೊಂಡು ಕಾಂಟಾಕ್ಟ್ ಮಾಡಿದ್ದಾರೆ. ಈಗ ಇದೆಲ್ಲವೂ ಸಾಧ್ಯವಾಗಿದೆ ಎಂದು ಮಾನ್ವಿತಾ ಹೇಳಿದ್ದಾರೆ.
ಮದುವೆ ಸುದ್ದಿ ಸಂಭ್ರಮದ ನಡುವೆ ಮತ್ತೊಂದು ವಿಶೇಷ ಅಂದರೆ, ಮಾನ್ವಿತಾ ತಾಯಿ ಸುಜಾತಾ ಅವರ ಹುಟ್ಟುಹಬ್ಬ ಅಕ್ಟೋಬರ್ 14 ಅದೇ ದಿನ ಅರುಣ್ ಹುಟ್ಟುಹಬ್ಬವಂತೆ. ಇಲ್ಲಿಂದ ಪಾಸಿಟಿವ್ ಸೂಚನೆ ಸಿಕ್ಕಿದೆ. ಅಂದಹಾಗೆ, ನಿಧನಕ್ಕೂ ಮುನ್ನವೇ ಮಾನ್ವಿತಾ ಅವರ ತಾಯಿ ಸುಜಾತಾ ಅವರು ಅರುಣ್ ತಾಯಿಯೊಂದಿಗೆ ಮಾತನಾಡಿದ್ದು ತಾಯಿ ನೋಡಿದ ಹುಡುಗನನ್ನೇ ಮಾನ್ವಿತಾ ಮದುವೆಯಾಗುತ್ತಿದ್ದಾರೆ.