ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಕಳೆದ ವರ್ಷ ರಾಜಕಾರಣಿ ರಾಘವ್ ಚಡ್ಡಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಆರು ತಿಂಗಳೊಳಗೆ ಒಂದು ವರ್ಷದಲ್ಲೇ ಪರಿಣಿತಿ ಗುಡ್ ನ್ಯೂಸ್ ಕೊಡಲು ಮುಂದಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಪರಿಣಿತಿ ಚೋಪ್ರಾ ಗರ್ಭಿಣಿಯಾಗಿದ್ದು ನಟಿಯ ಬೇಬಿ ಬಂಪ್ ಲುಕ್ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಯಾಮಿ ಗೌತಮಿ, ದೀಪಿಕಾ ಪಡುಕೋಣೆ, ವರುಣ್ ಧವನ್ ಪತ್ನಿ ನತಾಶಾ ಪ್ರೆಗ್ನೆನ್ಸಿ ಬಗ್ಗೆ ಗುಡ್ ನ್ಯೂಸ್ ಕೊಟ್ಟಿದ್ದರು. ಅಲ್ಲದೆ ನಟಿ ಕತ್ರಿನಾ ಕೈಫ್ ಕೂಡ ಗರ್ಭಿಣಿ ಎಂದು ಹೇಳಲಾಗುತ್ತಿದೆ. ಇದೀಗ ನಟಿ ಪರಿಣಿತಿ ಕೂಡ ಗರ್ಭಿಣಿ ಎನ್ನಲಾಗುತ್ತಿದ್ದು ಸದ್ಯ ನಟಿಯ ಪ್ರೆಗ್ನೆನ್ಸಿ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
ನಟಿ ವಿಮಾನ ನಿಲ್ದಾಣಕ್ಕೆ ಎಂಟ್ರಿ ಕೊಟ್ಟಾಗ ಬಿಳಿ ಶರ್ಟ್ಸ್ ಮತ್ತು ಶಾಟ್ಸ್ ಧರಿಸಿದ್ದರು. ಡ್ರೆಸ್ ತುಂಬಾ ಲೂಸ್ ಆಗಿತ್ತು. ನಿಧಾನವಾಗಿ ನಡೆಯುತ್ತಾ ಪಾಪರಾಜಿಗಳಿಗೆ ನಟಿ ಸ್ಮೈಲ್ ಮಾಡಿದ್ದರು. ಪರಿಣಿತಿ ಲುಕ್ ನೋಡಿದ್ರೆ ಪ್ರೆಗ್ನೆಂಟ್ ಎಂದೇ ಹೇಳಲಾಗುತ್ತಿದೆ. ನಟಿ ಪ್ರೆಗ್ನೆಂಟ್ ಆದ್ರಾ ಎಂದು ನೆಟ್ಟಿಗರು ಪ್ರಶ್ನೆ ಮಾಡ್ತಿದ್ದಾರೆ. ಆದ್ರೆ ಈ ಬಗ್ಗೆ ದಂಪತಿ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ.