ಮಾಜಿ ಸಿಎಂ SM ಕೃಷ್ಣ ಅವರು ಇಂದು ವಿಧಿವಶರಾಗಿದ್ದಾರೆ. ಹೀಗಾಗಿ ಸಾಕಷ್ಟು ರಾಜಕೀಯ ಮುಖಂಡರು ಅವರಿಗೆ ಸಂತಾಪ ಸೂಚಿಸಿದ್ದಾರೆ.
ಮಾಜಿ ಸಿಎಂ SM ಕೃಷ್ಣ ವಿಧಿವಶ: ಕಂಬನಿ ಮಿಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ!
ನಟಿ ರಮ್ಯಾ ಅವರು ಸದಾಶಿವನಗರ ಆಗಮಿಸಿ ಎಸ್ಎಂ ಕೃಷ್ಣ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ನಾನು ಮಾತನಾಡುವ ಸ್ಥಿತಿಯಲ್ಲಿ ಇಲ್ಲ ಎಂದು ಹೇಳಿ ತೆರಳಿದರು.
ರಮ್ಯಾ ಅವರನ್ನು ರಾಜಕಾರಣಕ್ಕೆ ಕರೆತಂದಿದ್ದೆ ಎಸ್ಎಂಕೆ. ಈ ಕಾರಣದಿಂದ ಹಲವಾರು ಬಾರಿ ರಮ್ಯಾ ಅವರು ಎಸ್ಎಂಕೆ ನಿವಾಸಕ್ಕೆ ತೆರಳಿ ಮಾತನಾಡಿ ಸಲಹೆಗಳನ್ನು ಪಡೆಯುತ್ತಿದ್ದರು.
ಇದೀಗ ಅವರ ನಿಧನ ರಮ್ಯಾಗೆ ಭಾರೀ ನೋವುಂಟು ಮಾಡಿದೆ.