ಸ್ಯಾಂಡಲ್ ವುಡ್ ಮೋಹಕ ತಾರೆ ರಮ್ಯಾ ಬಣ್ಣದ ಬದುಕಿನಿಂದ ದೂರವಾಗಿ ಹಲವು ವರ್ಷಗಳೆ ಕಳೆದಿದೆ. ಆದರೆ ಇಂದಿಗೂ ಕೋಟ್ಯಾಂತರ ಅಭಿಮಾನಿಗಳು ಆಕೆಯನ್ನು ಮತ್ತೆ ಸ್ಕ್ರೀನ್ ಮೇಲೆ ನೋಡ್ಬೇಕು ಎಂದು ಕಾಯ್ತಿದ್ದಾರೆ. ಈ ಮಧ್ಯೆ ರಮ್ಯಾ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಆದರೆ ದರ್ಶನ್ ಬಗ್ಗೆ ಕೇಳ್ತಿದ್ದಂತೆ ಉತ್ತರಿಸಲು ನಿರಾಕರಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೇಲ್ನಲ್ಲಿರುವ ದರ್ಶನ್ ಬಗ್ಗೆ ಎದುರಾದ ಪ್ರಶ್ನೆಗೆ ರಮ್ಯಾ, ಆ ಬಗ್ಗೆ ಮಾತನಾಡುವುದಿಲ್ಲ ಎಂದು ನಿರಾಕರಿಸಿದ್ದಾರೆ. ದರ್ಶನ್ ಕೇಸ್ ಹೆಸರು ಹೇಳ್ತಿದ್ದಂತೆ ನೋ ಎಂದಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ದರ್ಶನ್ ಜೈಲು ಸೇರಿದ್ದ ವೇಳೆ ಪ್ರತಿಕ್ರಿಯೆ ನೀಡಿದ್ದ ರಮ್ಯಾ, ನಟರಾಗಿ ಜವಾಬ್ದಾರಿಯುತ ಸ್ಥಾನದಲ್ಲಿ ಸಮಾಜಕ್ಕೆ ಒಳ್ಳೆಯದನ್ನು ನೀಡಬೇಕು. ಅಭಿಮಾನಿಗಳನ್ನು ಬಳಸಿಕೊಂಡು ಕೊಲೆ ಮಾಡುವುದು ಎಷ್ಟು ಸರಿ? ಇಂತಹದ್ದನ್ನು ಸಮರ್ಥಿಸಿಕೊಂಡರೆ ಸಮಾಜಕ್ಕೆ ನಾವು ಕೊಡುವ ಸಂದೇಶ ಏನು? ಕಾನೂನಿಗಿಂತ ಯಾರೂ ದೊಡ್ಡವರಿಲ್ಲ ಎಂದಿದ್ದರು.