ಬೆಂಗಳೂರು:- ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ಗೆ ಸಂಬಂಧಿಸಿದಂತೆ ಏರ್ಪೋರ್ಟ್ ಸಿಬ್ಬಂದಿ ಹಾಗೂ ಕಸ್ಟಮ್ಸ್ ಅಧಿಕಾರಿಗಳ ಮೇಲೂ ಶಂಕೆ ಮೂಡಿದೆ.
ಬ್ರಹ್ಮಕುಮಾರಿ ಈಶ್ವರಿ ವಿವಿಯಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಅಭಿನಂದನಾ ಕಾರ್ಯಕ್ರಮ!
ಈಗಾಗಲೇ ಸಿಬಿಐ ಮತ್ತು ಡಿಆರ್ಐ ಅಧಿಕಾರಿಗಳು ಫೀಲ್ಡಿಗಿಳಿದಿದ್ದು, ಬೆಂಗಳೂರು, ಮುಂಬೈ ವಿಮಾನ ನಿಲ್ದಾಣಗಳಲ್ಲಿ ಠಿಕಾಣಿ ಹೂಡಿದ್ದಾರೆ. ಏರ್ಪೋರ್ಟ್ ಸಿಬ್ಬಂದಿ, ಟ್ರಾವೆಲ್ ಏಜೆನ್ಸಿ, ಕಸ್ಟಮ್ಸ್ ಅಧಿಕಾರಿಗಳು, ಸ್ಥಳೀಯ ಪೊಲೀಸರ ಮೇಲೂ ಡಿಆರ್ಐ ಮತ್ತು ಸಿಬಿಐಗೆ ಅನುಮಾನ ಉಂಟಾಗಿದೆ.
ಹೀಗಾಗಿ, ಕೆಲವರನ್ನು ವಿಚಾರಣೆ ನಡೆಸಿದ್ದಾರೆ. ಚಿನ್ನ ಪಡೆದುಕೊಳ್ಳುತ್ತಿದ್ದ ಗ್ಯಾಂಗ್ ಪತ್ತೆಗೆ ತನಿಖಾ ಸಂಸ್ಥೆಗಳು ಮುಂದಾಗಿವೆ. ನಟಿ ರನ್ಯಾ ಯಾವೆಲ್ಲಾ ಚಿನ್ನದ ಮಳಿಗೆಗಳಿಗೆ ಹೋಗಿದ್ದರು ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ನಟಿ ರನ್ಯಾ ಹಿಂದೆ ದೆಹಲಿ ಲಿಂಕ್ ಇರುವ ಬಗ್ಗೆಯೂ ತನಿಖೆ ನಡೆಯುತ್ತಿದೆ.
ಒಂದೇ ವಾರದಲ್ಲಿ ಮೂರು ಕಡೆ ಚಿನ್ನ ಸ್ಮಗ್ಲಿಂಗ್ ಬೆಳಕಿಗೆ ಬಂದಿದೆ. ಮಾರ್ಚ್ 2ರಂದು ದೆಹಲಿ, ಮಾರ್ಚ್ 3ರಂದು ಬೆಂಗಳೂರು ನಂತರ ಮುಂಬೈ ವಿಮಾನ ನಿಲ್ದಾಣದಲ್ಲಿ ಗೋಲ್ಡ್ ಸ್ಮಗ್ಲಿಂಗ್ ಪತ್ತೆಯಾಗಿದೆ. ಮೂರು ಪ್ರಕರಣಗಳ ಸಂಬಂಧ ಕೆಜಿಗಟ್ಟಲೆ ಚಿನ್ನ ಜಪ್ತಿ ಮಾಡಿದ ಡಿಆರ್ಐ ಅಧಿಕಾರಿಗಳು, ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.