ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ನಟಿ ನಡೆದಾಡಲು ಕಷ್ಟ ಪಡುತ್ತಿದ್ದು ಹಲವು ಸಿನಿಮಾಗಳ ಶೂಟಿಂಗ್ ಗೆ ಬ್ರೇಕ್ ಹಾಕಿದ್ದರು. ಅಲ್ಲದೆ ಛಾವಾ ಸಿನಿಮಾದ ಪ್ರೀರಿಲೀಸ್ ಕಾರ್ಯಕ್ರಮದಲ್ಲಿ ಕುಂಟುತ್ತಲೆ ಓಡಾಡಿದ್ದರು. ಆದರೆ ಈಗ ರಶ್ಮಿಕಾ ಮಂದಣ್ಣ ಕಾಲು ನೋವಿನಿಂದ ಸಂಪೂರ್ಣ ಚೇತರಿಕೆ ಕಂಡಿದ್ದಾರೆ. ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಅವರು ನಡೆದುಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ. ಯಾವುದೇ ತೊಂದರೆ ಇಲ್ಲದೇ ಅವರು ನಡೆದುಕೊಂಡು ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲಾ ತಾಣದಲ್ಲಿ ವೈರಲ್ ಆಗಿದೆ.
ಕಾಲಿಗೆ ಪೆಟ್ಟು ಮಾಡಿಕೊಂಡ ಬಳಿಕ ರಶ್ಮಿಕಾ ಮಂದಣ್ಣ ಕುಂಟುತ್ತ ನಡೆಯುತ್ತಿದ್ದು ಅವರಿಗೆ ಇನ್ನೊಬ್ಬರ ಸಹಾಯ ಬೇಕಾಗುತ್ತಿತ್ತು. ಆದರೆ ಈಗ ಅವರು ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಯಾರ ಸಹಾಯವೂ ಇಲ್ಲದೇ ನಡೆದು ಬಂದಿದ್ದಾರೆ. ಹೈದರಾಬಾದ್ನಿಂದ ಮುಂಬೈಗೆ ಅವರು ಪ್ರಯಾಣ ಬೆಳೆಸಿದ್ದಾರೆ. ‘ಛಾವಾ’ ಸಿನಿಮಾ ಫೆಬ್ರವರಿ 14ರಂದು ಬಿಡುಗಡೆ ಆಗಲಿದೆ. ಆ ಸಿನಿಮಾದ ಪ್ರಮೋಷನ್ನಲ್ಲಿ ರಶ್ಮಿಕಾ ಮಂದಣ್ಣ ಭಾಗಿ ಆಗಲಿದ್ದಾರೆ.
‘ಛಾವಾ’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಅವರು ವಿಕ್ಕಿ ಕೌಶಲ್ ಗೆ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಐತಿಹಾಸಿಕ ಕಥಾಹಂದರ ಹೊಂದಿರುವ ಈ ಸಿನಿಮಾದ ಟ್ರೇಲರ್ ಗಮನ ಸೆಳೆದಿದೆ ‘ಪುಷ್ಪ 2’ ಸಿನಿಮಾದ ಸೂಪರ್ ಸಕ್ಸಸ್ ಬಳಿಕ ರಶ್ಮಿಕಾ ಅವರು ಚಾವಾ ಸಿನಿಮಾದಲ್ಲೂ ಮೋಡಿ ಮಾಡುವ ಸೂಚನೆ ಸಿಕ್ಕಿದೆ.