ದಕ್ಷಿಣ ಭಾರತದ ಹೆಸರಾಂತ ನಟಿ ಸಾಯಿ ಪಲ್ಲವಿ ಉಡುಪಿ (Udupi) ಶ್ರೀ ಕೃಷ್ಣ ಮಠಕ್ಕೆ (Shrikrishna Math) ಭೇಟಿ ನೀಡಿದ್ದಾರೆ. ಖಾಸಗಿ ಕಾರ್ಯದ ನಿಮಿತ್ತ ಉಡುಪಿಗೆ ಬಂದಿರುವ ಅವರು, ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದೇವರ ದರ್ಶನ ಕೈಗೊಂಡಿದ್ದಾರೆ. ರಥಬೀದಿಯಲ್ಲಿರುವ ಕಾಣಿಯೂರು ಮಠಕ್ಕೆ ತೆರಳಿ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಮಠಕ್ಕೆ ಭೇಟಿ ನೀಡಿದ ಸಾಯಿ ಪಲ್ಲವಿ ಅವರನ್ನು ಶ್ರೀ ಕೃಷ್ಣ ಮಠದ ವತಿಯಿಂದ ಗೌರವಿಸಲಾಯಿತು.
ಸಾಯಿ ಪಲ್ಲವಿ (Sai pallavi) ಪ್ರತಿಭಾನ್ವಿತ ನಟಿ. ಆದರೆ ಕಳೆದೊಂದು ವರ್ಷದಿಂದ ಸಾಯಿ ಪಲ್ಲವಿ ಅಡ್ರೆಸ್ಗೆ ಇಲ್ಲ. ಗಾರ್ಗಿ ರಿಲೀಸ್ ಆಗಿ ವರ್ಷ ಉರುಳಿದೆ. ಬಳಿಕ ಒಂದೂ ಸಿನಿಮಾ ಬಂದಿಲ್ಲ. ಸಿನಿಮಾ ಘೋಷಣೆಯೂ ಆಗಿಲ್ಲ. ಏನಾಯ್ತು ಸಾಯಿ ಪಲ್ಲವಿ ಬದುಕಲ್ಲಿ?
ವಿರಾಟ ಪರ್ವಂ ಇದೊಂದು ಚಿತ್ರಕ್ಕಾಗಿ ಸಾಯಿಪಲ್ಲವಿ ನೀಡಿದ ಸಂದರ್ಶನ ಜೀವನದ ದಿಕ್ಕನ್ನೇ ಬದಲಾಯಿಬಿಡುತ್ತೆ ಅಂತ ಖುದ್ದು ಸಾಯಿಪಲ್ಲವಿ ಅಂದುಕೊಂಡಿರಲಿಲ್ಲ. ಕಾಶ್ಮೀರ್ ಫೈಲ್ಸ್ (The Kashmir Files) ಸಿನಿಮಾದ ವಿವಾದ (Controversy) ಬಗ್ಗೆ ತಮ್ಮದೊಂದು ಅಭಿಪ್ರಾಯ ಹೇಳಲು ಹೋಗಿ ಹಿಂದುತ್ವವಾದಿಗಳ ಕೆಂಗಣ್ಣಿಗೆ ಗುರಿಯಾದ ಸಾಯಿಪಲ್ಲವಿ ಈಗ ಸಿನಿಮಾ ರಂಗದಲ್ಲಿ ಹೆಸರೇ ಮರೆಯುವಂತೆ ಕಣ್ಮರೆಯಾಗುತ್ತಿರೋದು ವಿಷಾದ.
ನೈಜ ಅಭಿನಯ. ಸಹಜ ಸೌಂದರ್ಯ. ಅದ್ಭುತ ನೃತ್ಯಕಲೆಗೆ ಹೆಸರಾದ ಪ್ರತಿಭಾನ್ವಿತೆಗೆ ಈಗ ಸಿನಿಮಾ ಅವಕಾಶಗಳೇ ಇಲ್ಲ. ಗಾರ್ಗಿಯೇ ಕೊನೆ. ಮತ್ಯಾವ ಸಿನಿಮಾ ತೆರೆಕಂಡಿಲ್ಲ. ಕಾರ್ತಿಕೇಯನ್ ಜೊತೆ ಅನೌನ್ಸ್ ಆದ ಪ್ರಾಜೆಕ್ಟ್ ಯಾವ ಹಂತದಲ್ಲಿದೆಯೋ ಅದರ ಸುಳಿವೂ ಇಲ್ಲ. ಪರಿಣಾಮ ಪ್ರತಿಭಾನ್ವಿತೆಯ ಕೈ ಖಾಲಿ ಖಾಲಿ.