ಮಂಡ್ಯ ತಾಲೂಕಿನ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಹಾಗೂ ಆರ್ ಎಪಿಸಿಎಂಎಸ್ ನಿರ್ದೇಶಕ ಬೇಲೂರು ಸೋಮಶೇಖರ್ ಅವರು ಮಂಡ್ಯ ಕ್ಷೇತ್ರದ ಶಾಸಕ ರವಿಕುಮಾರ್ ಗಣಿಗ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.
ಬೇಲೂರು ಸೋಮಶೇಖರ್ ಅವರು ಮಾಜಿ ಸಂಸದ ಸುಮಲತಾ ಅಂಬರೀಷ್ ಅವರ ಆಪ್ತರಾಗಿದ್ದು, ಅಖಿಲ ಕರ್ನಾಟಕ ಅಂಬರೀಷ್ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷರಾಗಿದ್ದಾರೆ.
ಶುಕ್ರವಾರದಂದು ತಪ್ಪಿಯೂ ಈ ಕೆಲಸಗಳನ್ನು ಮಾಡದಿರಿ..! ಲಕ್ಷ್ಮೀ ಮುನಿಯುವುದು ಗ್ಯಾರೆಂಟಿ
ಕಾಂಗ್ರೆಸ್ ಸೇರ್ಪಡೆಗೊಂಡ ಬೇಲೂರು ಸೋಮಶೇಖರ್ ಅವರನ್ನು ಮನ್ ಮುಲ್ ನಿರ್ದೇಶಕ ಯು.ಸಿ.ಶಿವಪ್ಪ, ಪಿಎಲ್ಲಿ ಬ್ಯಾಂಕ್ ಅಧ್ಯಕ್ಷ ಹೊಸಹಳ್ಳಿ ಶಿವಲಿಂಗೇಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ನಗರಸಭಾ ಮಾಜಿ ಸದಸ್ಯ ಅನಿಲ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಸಿ.ಕೆ.ನಾಗರಾಜ್, ಬಿಳಿದೇಗಲು ಬೋರೇಗೌಡ, ಮಹಾದೇವ ಇದ್ದರು.