ಬೆಂಗಳೂರು:- ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ADGP ಚಂದ್ರಶೇಖರ್ ದೂರು ಕೊಟ್ಟಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ಆಪ್ತನ ಮೇಲೆ ಹಲ್ಲೆ: ಕಾಂತಿಲಾಲ್ ಬನ್ಸಾಲಿ ಬಳಿಯಿದ್ದ ಹಣ ದೋಚಿ ಎಸ್ಕೇಪ್!
ಸುಳ್ಳು ಆರೋಪ ಹಾಗೂ ಕರ್ನಾಟಕ ಕೆಡರ್ನಿಂದ ಬೇರೆ ರಾಜ್ಯಕ್ಕೆ ಕಳಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಕುಮಾರಸ್ವಾಮಿ, ನಿಖಿಲ್, ಸುರೇಶ್ ಬಾಬು ವಿರುದ್ಧ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಚಂದ್ರಶೇಖರ್ ಅವರು ಈ ದೂರು ಆಧರಿಸಿ ಪೊಲೀಸರು ಎನ್ಸಿಆರ್ ದಾಖಲಿಸಿಕೊಂಡಿದ್ದಾರೆ.
ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಮತ್ತು ಲೋಕಾಯುಕ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ.ಚಂದ್ರಶೇಖರ್ ನಡುವಿನ ಜಂಗೀ ಕುಸ್ತಿ ಮತ್ತೊಂದು ಹಂತಕ್ಕೆ ಹೋಗಿದೆ. ಇಷ್ಟು ದಿನ ಆರೋಪ-ಪ್ರತ್ಯಾರೋಪ ಮಾಡಿಕೊಳ್ಳುತ್ತಿದ್ದರು. ಆದ್ರೆ, ಇದೀಗ ಎಡಿಜಿಪಿ ಚಂದ್ರಶೇಖರ್ ಅವರು ಒಂದು ಹೆಜ್ಜೆ ಮುಂದೆ ಹೋಗಿ ಕುಮಾರಸ್ವಾಮಿ ವಿರುದ್ಧ ಪೊಲೀಸರಿಗೆ ದೂರು ದಾಖಲಸಿದ್ದಾರೆ.