ಅಮರಾವತಿ:- ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಕಲಬೆರಕೆ ಆರೋಪಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಅರೆಸ್ಟ್ ಮಾಡಲಾಗಿದೆ. ವಿಪಿನ್ ಜೈನ್, ಪೊಮಿಲ್ ಜೈನ್, ಅಪೂರ್ವ ವಿನಯ್ ಕಾಂತ್ ಚಾವ್ಡಾ, ದುಂಡಿಗಲ್ನ ಎಆರ್ ಡೈರಿ ಎಂಡಿ ರಾಜಶೇಖರನ್ ಬಂಧಿತ ಆರೋಪಿಗಳು.
ಟೆಂಡರ್ ಪಡೆಯುವ ಹಂತದಿಂದ ಪೂರೈಕೆ ತನಕ ನಿಯಮ ಉಲ್ಲಂಘಿಸಿದ ಆರೋಪದಡಿ ನಾಲ್ವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಗಳು ತುಪ್ಪ ಪೂರೈಕೆಯ ನೆಪದಲ್ಲಿ ಅನೇಕ ನಿಯಮಗಳನ್ನು ಉಲ್ಲಂಘನೆ ಮಾಡಿರುವುದು ದೃಢವಾಗಿದೆ. ವೈಷ್ಣವಿ ಡೈರಿ ಮುಂದೆ ಎಆರ್ ಡೈರಿ ಹೆಸರಿರುವ ಸುಳ್ಳು ದಾಖಲೆಗಳು ಮತ್ತು ಸೀಲುಗಳನ್ನು ಬಳಸಿ ಟೆಂಡರ್ ಪಡೆದಿದೆ ಎನ್ನಲಾಗಿದೆ. ಹೀಗಾಗಿ ತುಪ್ಪದ ಟೆಂಡರ್ ಪಡೆಯಲು ನಕಲಿ ದಾಖಲೆಗಳು, ಸೀಲ್ ಬಳಕೆ ಮಾಡಿದ್ದಾರೆ. ದಾಖಲೆಗಳನ್ನು ತಿರುಚಲಾಗಿರುವುದು, ಅಲ್ಲದೇ ತುಪ್ಪ ಪೂರೈಕೆಯಲ್ಲಿಯೂ ವ್ಯತ್ಯಾಸ ನಡೆದಿರುವ ಕಾರಣಕ್ಕೆ ಸಿಬಿಐ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದಾರೆ