ಹಾವೇರಿ: ರಾಜ್ಯದ ಹಲವೆಡೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಸರ್ಕಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ದಾವಣಗೆರೆ, ಧಾರವಾಡ, ಬೆಳಗಾವಿ ಹಾವೇರಿ, ಬೀದರ್ ಸೇರಿದಂತೆ ರಾಜ್ಯದ ವಿವಿಧೆಡೆ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಇನ್ನೂ ಹಾವೇರಿಯಲ್ಲಿ ಕೂಡ ಭ್ರಷ್ಟರ ನಿವಾಸಗಳಿಂದ ಹಣ, ಚಿನ್ನ, ದಾಖಲೆಗಳನ್ನು ವಶಪಡಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
Recruitment 2024: SSLC ಪಾಸಾದವರಿಗೆ “NABARD”ನಲ್ಲಿದೆ ಭರ್ಜರಿ ಉದ್ಯೋಗವಕಾಶ! ತಿಂಗಳಿಗೆ 35,000 ರೂ. ಸಂಬಳ!
ಇದೇ ವೇಳೆ, ಅಚ್ಚರಿಯ ವಿದ್ಯಮಾನವೊಂದು ನಡೆದಿದೆ. ಹಾವೇರಿಯ ಬಸವೇಶ್ವರ ನಗರದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಉಪವಿಭಾಗದ ಎಇ ಕಾಶೀನಾಥ್ ಭಜಂತ್ರಿ ಮನೆ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು 14 ಲಕ್ಷ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ.
ಬೆಳಗ್ಗೆ ಮನೆಯಲ್ಲಿ ಮಲಗಿದ್ದ ಭಜಂತ್ರಿ, ಲೋಕಾಯುಕ್ತ ಅಧಿಕಾರಿಗಳ ದಾಳಿ ಸುಳಿವು ಸಿಗುತ್ತಿದ್ದಂತೆಯೇ ಸುಮಾರು 9 ಲಕ್ಷ ರೂ. ಹಣದ ಗಂಟನ್ನು ಕಿಟಿಕಿಯಿಂದ ಆಚೆ ಎಸೆದಿದ್ದಾರೆ. ಆದರೆ, ತಕ್ಷಣ ಗಮನಿಸಿದ ಲೋಕಾಯುಕ್ತ ಅಧಿಕಾರಿಗಳು ಅದನ್ನೂ ವಶಪಡಿಸಿಕೊಂಡಿದ್ದಾರೆ.