ಬೆಂಗಳೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರ ನಟ ದರ್ಶನ್ ಅವರನ್ನು ಪೊಲೀಸರು ವಶಕ್ಕೆ ಪಡೆದ ಬೆನ್ನಲ್ಲೇ ನಟ ದರ್ಶನ್ ಗೆಳತಿ ಪವಿತ್ರಾಗೌಡರನ್ನು ಬೆಂಗಳೂರಿನಲ್ಲಿ ಅರೆಸಟ್ ಮಾಡಲಾಗಿದೆ. ಆರ್.ಆರ್. ನಗರ ಪೊಲೀಸ್ ಇನ್ಸ್ ಪೆಕ್ಟರ್ ಮಾರ್ಕಂಡಯ್ಯ ಅವರು ಪವಿತ್ರಾಗೌಡಳನ್ನು ವಶಕ್ಕೆ ಪಡೆದು ಕಾಮಾಕ್ಷಿ ಪಾಳ್ಯ ಪೊಲೀಸ್ ಸ್ಟೇಷನ್ ಗೆ ಕರೆದುಕೊಂಡು ಹೋಗಿದ್ದಾರೆ. ಪವಿತ್ರಾ ಜೊತೆ ಅವರ ಅಕ್ಕ ಕೂಡ ಠಾಣೆಗೆ ಆಗಮಿಸಿದ್ದಾರೆ.
Ginger Side Effects: ಅತಿಯಾದ ಶುಂಠಿ ಸೇವನೆಯಿಂದ ಏನೆಲ್ಲಾ ಅಡ್ಡ ಪರಿಣಾಮಗಳಾಗುತ್ತೆ ಗೊತ್ತಾ..?
ಇನ್ನೂ ಈ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 10 ಜನರನ್ನು ವಿಜಯನಗರ ಎಸಿಪಿ ಚಂದನ್ ತಂಡ ಬಂಧಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಮೈಸೂರಿನ ಱಡಿಸನ್ ಹೋಟೆಲ್ನಲ್ಲಿ ದರ್ಶನ್ ಅರೆಸ್ಟ್ ಮಾಡಲಾಗಿದ್ದು ನಟ ದರ್ಶನ್ ಸೇರಿದಂತೆ ಪಟ್ಟಣಗೆರೆ ಜಯಣ್ಣ ಪುತ್ರ ವಿನಯ್, ಕಿರಣ್, ಮಧು, ಲಕ್ಷ್ಮಣ್, ಆನಂದ್, ರಾಘವೇಂದ್ರ ಸೇರಿ 10 ಜನರನ್ನು ಅರೆಸ್ಟ್ ಮಾಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದರ್ಶನ್ ಗೆಳತಿ ಪವಿತ್ರಾಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.