ಬೆಂಗಳೂರು: ದೀಪಾವಳಿ ಮುಗಿದ ನಂತರ ನವೆಂಬರ್ 15ಕ್ಕೆ ಹಲವು ಜೆಡಿಎಸ್ -ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂದು ದೆಹಲಿಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಮಂಡಿ ನೋವು, ಸಂದಿ ನೋವುಗಳಿಂದ ಜೀವನದಲ್ಲಿ ಬೇಸತ್ತಿದ್ದರೆ ಇದೊಂದು ಚಿಕಿತ್ಸೆ ಪ್ರಯತ್ನ ಮಾಡಿ: ಉಚಿತ ಸಲಹೆ
ದೆಹಲಿ ಪ್ರವಾಸದಲ್ಲಿರುವ ಡಿಸಿಎಂ ಡಿ ಕೆ ಶಿವಕುಮಾರ್ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೀಪಾವಳಿ ನಂತರ ರಾಜ್ಯ ರಾಜಕೀಯದಲ್ಲಿ ಹಲವು ಬದಲಾವಣೆಗಳಾಗುತ್ತವೆ. ಬಿಜೆಪಿ ಹಾಗೂ ಜೆಡಿಎಸ್ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ. ನವೆಂಬರ್ 15ರಂದು ಮತ್ತಷ್ಟು ನಾಯಕರು ನಮ್ಮ ಪಕ್ಷಕ್ಕೆ ಸೇರುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ.
ಬಿಜೆಪಿಯಲ್ಲಿ ನಾಯಕತ್ವದ ಬಗ್ಗೆಯೇ ತೀರ್ಮಾನ ಮಾಡಲು ಆಗಿಲ್ಲ. ಬಿಜೆಪಿಯವರು ಗೊಂದಲ ಸೃಷ್ಟಿಸಲು ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿಯಲ್ಲೇ ಸಾಕಷ್ಟು ಸಮಸ್ಯೆ ಇದೆ, ಹೀಗಿರುವಾಗ ನಮ್ಮ ಶಾಸಕರನ್ನು ಅವರು ಸೆಳೆದುಕೊಳ್ಳುವುದು ದೂರದ ಮಾತು ಎಂದರು