ವಿಜಯಪುರ: ಲೋಕಸಭಾ ಚುನಾವಣೆ 2024 ಮುಕ್ತಾಯವಾದ 15 ದಿನಗಳ ಬಳಿಕ ಡಿಕೆ ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ ನೀಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಯತ್ನಾಳ್ ಅವರು, ” ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲು ಸಾಕಷ್ಟು ಪ್ಲ್ಯಾನ್ ಹಾಕಿದ್ದಾರೆ. ಬಾಗಲಕೋಟೆಯಲ್ಲಿ ಸಚಿವ ಶಿವಾನಂದ ಪಾಟೀಲ್ ಮಗಳನ್ನ ಗೆಲ್ಲಿಸಿಕೊಟ್ಟರೆ ಶಿವಾನಂದ ಪಾಟೀಲ್ ನನ್ನ ಜೊತೆಗಿರ್ತಾರೆ.
ನಾನು ಅವರು ಸೇರಿ ಸಿದ್ದರಾಮಯ್ಯ ಅವರನ್ನ ಇಳಿಸೋಕೆ ಕಾರ್ಯತಂತ್ರ ಮಾಡಿದ್ದೇವೆ ಎನ್ನುವ ಸಂದೇಶವನ್ನ ಜನರಿಗೆ ಡಿಕೆ ಶಿವಕುಮಾರ್ ಕೊಟ್ಟಿದ್ದಾರೆ ” ಎಂದು ಆರೋಪಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಸಿಎಂ ಕುರ್ಚಿಯಿಂದ ಇಳಿಸಲು ಮುಂದಾದರೆ ಕಾಂಗ್ರೆಸ್ ಸರ್ಕಾರವೇ ಒಡೆದು ಹೋಗುತ್ತದೆ. ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತದೆ ಎಂದು ಭವಿಷ್ಯ ನುಡಿದರು. ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಜನತೆಗೆ ಕೊಟ್ಟಿರುವ ಪಂಚ ಗ್ಯಾರಂಟಿಗಳಲ್ಲಿ ಸಿದ್ದರಾಮಯ್ಯ ಸಿಎಂ ಹೋಗೋದು ಕೂಡ ಒಂದು ಗ್ಯಾರಂಟಿ ಎಂದು ಯತ್ನಾಳ್ ಹೇಳಿದರು.
ನಿಮಗೆ ಈರುಳ್ಳಿ ಕತ್ತರಿಸಿ ಫ್ರಿಡ್ಜ್ʼನಲ್ಲಿ ಇಡೋ ಅಭ್ಯಾಸವಿದೆಯಾ?! ಇದೆಷ್ಟು ಡೇಂಜರ್ ಗೊತ್ತಾ ?
ದೇಶಕ್ಕೆ ನರೇಂದ್ರ ಮೋದಿ ಅವರನ್ನು ಬಿಟ್ಟರೆ ಪರ್ಯಾಯ ನಾಯಕ ಇಲ್ಲಎಂಬುವುದು ಜನರಿಗೆ ತಿಳಿದಿದೆ. ಪ್ರತಿಯೊಬ್ಬರ ತಲೆಯಲ್ಲಿಮೋದಿ ಮತ್ತು ಬಿಜೆಪಿ ಇದೆ. ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿನಾವು ಕೆಲಸ ಮಾಡಬೇಕು. ಮೊದಲು ತಲೆಯಿಂದ ಜಾತಿ ಕಿತ್ತೋಗೆಯಿರಿ. ಮೋದಿಯವರು ಬಂದರೆ ಸನಾತನ ಧರ್ಮ ಉಳಿಯುತ್ತದೆ. ನಮ್ಮ ಜಾತಿಗಳು ಇರುತ್ತವೆ. ಎಲ್ಲ ಸಮುದಾಯದವರು ನೆಮ್ಮದಿಯಿಂದ ಜೀವನ ಮಾಡಲು ಸಾಧ್ಯ ಎಂದರು.