ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಇಡೀ ದಿನ ಜನತಾ ದರ್ಶನ ನಡೆಸಲಿದ್ದಾರೆ.
ಬೀದಿ ಬದಿ ವ್ಯಾಪಾರಿಗಳಿಗೆ, ತಳ್ಳಯವ ಗಾಡಿಯಲ್ಲಿ ವ್ಯಾಪಾರ ಮಾಡುವವರಿಗೆ ಆಗುತ್ತಿರುವ ಪೊಲೀಸ್ ಮತ್ತು ಬಿಬಿಎಂಪಿ ಅಧಿಕಾರಿಗಳ ಕಿರುಕುಳದ ಬಗ್ಗೆ ಬಡ ವ್ಯಾಪಾರಿ ನಿಂಗಮ್ಮ ಅವರಿಂದ ಮುಖ್ಯಮಂತ್ರಿಗಳಿಗೆ ದೂರು.
ತಕ್ಷಣ ಪೊಲೀಸ್ ಅಧಿಕಾರಿಗಳು ಮತ್ತು ಬಿಬಿಎಂಪಿ ಅಧಿಕಾರಿಗಳನ್ನು ಕರೆಸಿ ನಿಂಗಮ್ಮ ಅವರಿಗೇ ಕಿರುಕುಳ ತಪ್ಪಿಸುವಂತೆ ಸೂಚನೆ ನೀಡಿದ ಸಿಎಂ.
ಅಹವಾಲು ಸಲ್ಲಿಸುವವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸಿಎಂ ಗೃಹ ಕಚೇರಿ ಕೃಷ್ಣಾ ಆವರಣದಲ್ಲಿ 20 ಕೌಂಟರ್ ವ್ಯವಸ್ಥೆ ಮಾಡಲಾಗಿದೆ. ಹಿರಿಯ ನಾಗರಿಕರು ಹಾಗೂ ಅಂಗವಿಕಲರಿಗೆ ಎರಡು ಪ್ರತ್ಯೇಕ ಕೌಂಟರ್ಗಳು ಇರಲಿವೆ.