ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ಸೋಲುತ್ತಿದ್ದಂತೆ ಪಾಕ್ ಆಟಗಾರ ನಸೀಮ್ ಶಾ ಕಣ್ಣೀರು ಹಾಕಿದರು.
3 ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪದಗ್ರಹಣ… ಗದಗನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ!
9ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ನಸೀಮ್ ಶಾ ಅಂತಿಮ ಓವರ್ ವೇಳೆ ದಿಟ್ಟ ಹೋರಾಟ ಪ್ರದರ್ಶಿಸಿದ್ದರು. 4 ಎಸೆತಗಳನ್ನು ಎದುರಿಸಿದ್ದ ನಸೀಮ್ 2 ಫೋರ್ಗಳೊಂದಿಗೆ 10 ರನ್ ಬಾರಿಸಿದ್ದರು. ಇದಾಗ್ಯೂ ಪಾಕ್ ತಂಡಕ್ಕೆ ಗೆಲುವು ತಂದು ಕೊಡಲು ಸಾಧ್ಯವಾಗಿರಲಿಲ್ಲ
ಅತ್ತ ಟೀಮ್ ಇಂಡಿಯಾ 6 ರನ್ಗಳಿಂದ ರೋಚಕ ಜಯ ಸಾಧಿಸುತ್ತಿದ್ದಂತೆ, ಇತ್ತ ದುಃಖತಪ್ತನಾದ ನಸೀಮ್ ಶಾ ಅಳಲಾರಂಭಿಸಿದರು. ಈ ವೇಳೆ ಸಹ ಆಟಗಾರ ಶಾಹೀನ್ ಅಫ್ರಿದಿ ಸಮಾಧಾನಪಡಿಸಲು ಯತ್ನಿಸಿದರು.
ಇನ್ನು ಶೇಕ್ ಹ್ಯಾಂಡ್ ನೀಡುವ ವೇಳೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೂಡ ಪಾಕ್ ತಂಡದ ಯುವ ವೇಗಿಯನ್ನು ಸಮಾಧಾನ ಪಡಿಸುತ್ತಿರುವುದು ಕಂಡು ಬಂತು. ಇದೀಗ ಈ ಭಾವುಕ ಕ್ಷಣಗಳ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ
![](https://ainlivenews.com/wp-content/uploads/2024/01/Ad-Banner-copy-scaled.jpg)