ವಕ್ಫ್ ಮಂಡಳಿ ರದ್ದಾಗಬೇಕು, ರೈತರ ಜಮೀನಿನ ಪಹಣಿಯಲ್ಲಿ ಬರೆದ ವಕ್ಫ್ ಹೆಸರು ತೆಗೆಸಿಹಾಕಬೇಕು. ಕೇಂದ್ರದಲ್ಲಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ವಕ್ಫ್ ಮಂಡಳಿಗೆ ನ್ಯಾಯಾಂಗದ ಅಧಿಕಾರ ನೀಡಿದೆ. ಇದನ್ನು ಬಳಸಿಕೊಂಡು ವಕ್ಫ್ ಮಂಡಳಿ ರೈತರ ಜಮೀನು ನುಂಗುತ್ತಿದೆ. ಕಾಂಗ್ರೆಸ್ ಅಧಿಕಾರ ಪಡೆಯುವ ರಾಜ್ಯಗಳಲ್ಲಿ ಮಿನಿ ಪಾಕಿಸ್ತಾನ ನಿರ್ಮಿಸುತ್ತಿದೆ. ವಿಧಾನಸೌಧ, ಲಾಲ್ಬಾಗ್ ಕೂಡ ನಮ್ಮದು ಎಂದು ಇವರು ಹೇಳುತ್ತಾರೆ ಎಂದು ದೂರಿದರು
ವಕ್ಫ್ ಮಂಡಳಿ ತಿಮಿಂಗಿಲದಂತೆ ಬಡವರ ಜಮೀನು ನುಂಗುತ್ತಿದೆ. ರೈತರು ಕಂಗಾಲಾಗಿ ತಮ್ಮ ಆಸ್ತಿಗಳ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ ಎಂದರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಬಳಿಕ ಮುಸ್ಲಿಮರಿಗೆ ಎರಡು ಕೊಂಬು ಬಂದಿದೆ. ಸಿದ್ದರಾಮಯ್ಯ ಎಂದರೆ ಅಹಿಂದ ನಾಯಕ ಅಲ್ಲ. ಅವರೀಗ ಮುಸ್ಲಿಮರ ಚಾಂಪಿಯನ್ ಆಗಲು ಮುಂದಾಗಿದ್ದಾರೆ. ಲವ್ ಜಿಹಾದ್, ಲ್ಯಾಂಡ್ ಜಿಹಾದ್ ಬಳಿಕ ರೇಷನ್ ಕಾರ್ಡ್ ಜಿಹಾದ್ ಆರಂಭಿಸಿದ್ದಾರೆ. 45 ವರ್ಷದಿಂದ ರೇಷನ್ ಕಾರ್ಡ್ ಹೊಂದಿದ್ದ ವೃದ್ಧೆಯೊಬ್ಬರು ಈಗ ಕಾರ್ಡ್ ಕಳೆದುಕೊಂಡಿದ್ದಾರೆ. ಆದರೆ ಸರ್ಕಾರ ಮರಳಿ ಅರ್ಜಿ ಹಾಕಿ ಎನ್ನುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.