ರಾಜ್ಯ ಸರ್ಕಾರ ಕಳೆದ ಕೆಲ ದಿನಗಳ ಹಿಂದೆ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡುವ ಮೂಲಕ ಜನರಿಗೆ ಶಾಕ್ ನೀಡಿತ್ತು. ಇದರಿಂದ ಸರ್ಕಾರದ ವಿರುದ್ಧ ಪ್ರತಿಯೊಬ್ಬರು ತಿರುಗಿ ಬಿದ್ದಿದ್ದರು. ಇದೀಗ ಜನರ ವ್ಯಾಪಕ ಆಕ್ರೋಶದ ಬಳಿಕ ಎಚ್ಚೆತ್ತುಕೊಂಡ ಸಿಎಂ ಸಿದ್ದರಾಮಯ್ಯ ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಬಿಪಿಎಲ್ ಕಾರ್ಡ್ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ಹೊರಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ, ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇನ್ನು ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಆದೇಶ ಹೊರಡಿಸಿದ್ದಾರೆ.
ಒಂದು ವೇಳೆ ಬಡ ಕುಟುಂಗಳವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಎಚ್ವರಿಕೆ ನೀಡಿದ್ದಾರೆ.
ಕಳೆದ ಆಗಸ್ಟ್ ತಿಂಗಳಿನಲ್ಲೇ ಆಹಾರ ಇಲಾಖೆಗೆ ಇ ಗವರ್ನೆನ್ಸ್ ಇಲಾಖೆ ಮಾಹಿತಿ ಕೊಟ್ಟಿದೆ. ಇದೇ ಮಾಹಿತಿ ಇಟ್ಟುಕೊಂಡೇ 22 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲು ಮುಂದಾಗಿದೆ. ಆದ್ರೆ, ಇದಕ್ಕೆ ವ್ಯಾಪಕ ಆಕ್ರೋಶಗಳು ವ್ಯಕ್ತವಾಗಿವೆ. ಸರ್ಕಾರಿ ನೌಕರರು ಅಲ್ಲದ ಹಾಗೂ ತೆರಿಗೆ ಕಟ್ಟುದವರ ಕುಟುಂಬಗಳ ಬಿಪಿಎಲ್ ಕಾರ್ಡ್ಗಳು ಸಹ ರಿಜೆಕ್ಟ್ ಆಗಿವೆ. ಇದರಿಂದ ನೊಂದ ಜನರು ಸಾಮಾಜಿಕ ಜಾಲತಾಣ, ಮಾಧ್ಯಮಗಳ ಮೂಲಕ ಸರ್ಕಾರವನ್ನ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ವ್ಯಾಪಕ ಜನಾಕ್ರೋಶದ ಬಳಿಕ ಇನ್ನಷ್ಟು ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ತಿಳಿದ ಸಿದ್ದರಾಮಯ್ಯ, ಕಾರ್ಡ್ ರದ್ದು ಮಾಡದಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಆದೇಶ ಮಾಡಿದ್ದಾರೆ. ಅಲ್ಲದೇ ವಿನಾಕಾರಣ ರದ್ದು ಮಾಡಿದರೆ ಕ್ರಮಕೈಗೊಳ್ಳುವ ಎಚ್ಚರಿಕೆಯನ್ನು ಸಹ ನೀಡಿದ್ದಾರೆ. ಇನ್ನು ಈಗಾಗೇ ರದ್ದಾಗಿರುವ ಬಿಪಿಎಲ್ ಕಾರ್ಡ್ಗಳನ್ನು ಸಂಬಂಧಪಟ್ಟವರಿಗೆ ಸರಿ ಮಾಡಿ ವಾಪಸ್ ನೀಡುವಂತೆ ಖಡಕ್ ಸೂಚನೆ ನೀಡಿದ್ದಾರೆ.