ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಸಿನಿಮಾದ ವೇಳೆ ಸಂಬಂವಿಸಿದ ಕಾಲ್ತುಳಿತ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಘಟನೆಯಿಂದ ನಟ ಅಲ್ಲು ಅರ್ಜುನ್ ಸಾಕಷ್ಟು ನೊಂದಿದ್ದರು. ಇದೀಗ ಸಿನಿಮಾ ರಿಲೀಸ್ ಆದ ಕೆಲ ದಿನಗಳ ಬಳಿಕ ಅಲ್ಲು ಅರ್ಜುನ್ ಬನ್ಸಾಲಿ ಕಚೇರಿಯಲ್ಲಿ ಕಾಣಿಸಿಕೊಂಡು ಕುತೂಹಲ ಮೂಡಿಸಿದ್ದಾರೆ. ಬನ್ಸಾಲಿ ಹಾಗೂ ಅಲ್ಲು ಅರ್ಜುನ್ ಒಟ್ಟಿಗೆ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಕೇಳಿ ಬಂದಿದೆ.
ಅಲ್ಲು ಅರ್ಜುನ್ ಹಾಗೂ ಬಾಲಿವುಡ್ನ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಸಿನಿಮಾ ಮಾಡುತ್ತಾರೆ ಎನ್ನುವ ಸುದ್ದಿ ಈ ಹಿಂದೆ ಕೆಲ ಬಾರಿ ಕೇಳಿ ಬಂದಿತ್ತು. ಆದರೆ ಆ ವೇಳೆ ಅದು ಫೈನಲ್ ಆಗಿರಲಿಲ್ಲ. ಆದರೆ ಇದೀಗ ಪುಷ್ಪ 2 ಸಿನಿಮಾ ಬಿಡುಗಡೆ ಆಗಿದ್ದು ಇದೀಗ ಬನ್ಸಾಲಿ ಅಲ್ಲು ಅರ್ಜುನ್ ಒಟ್ಟಿಗೆ ಸಿನಿಮಾ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದ್ದು ಬನ್ಸಾಲಿ ಅವರನ್ನು ಅಲ್ಲು ಅರ್ಜುನ್ ಮುಂಬೈನ ಕಚೇರಿಯಲ್ಲಿ ಭೇಟಿಯಾಗಿದ್ದಾರೆ.
ಅಲ್ಲು ಅರ್ಜುನ್ ಅವರು ಇತ್ತೀಚೆಗೆ ಮುಂಬೈಗೆ ತೆರಳಿದ್ದರು. ಬನ್ಸಾಲಿ ಕಚೇರಿಯಲ್ಲಿ ಅಲ್ಲು ಅರ್ಜುನ್ ಕಾಣಿಸಿಕೊಂಡಿದ್ದಾರೆ. ಸಿನಿಮಾ ಬಗ್ಗೆ ಇವರು ಮಾತುಕತೆ ನಡೆಸಿರಬಹುದು ಎಂದು ಅನೇಕರು ಊಹಿಸಿದ್ದಾರೆ. ಸದ್ಯ ಬನ್ಸಾಲಿ ಅವರು ‘ಲವ್ ಆ್ಯಂಡ್ ವಾರ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದು ಈ ಸಿನಿಮಾ ಮುಗಿದ ಬಳಿಕ ಅಲ್ಲು ಅರ್ಜುನ್ ಜೊತೆ ಕೈ ಜೋಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.