ಪುಷ್ಪ 2 ಸಿನಿಮಾದ ಪ್ರೀಮಿಯರ್ ವೇಳೆ ನಡೆದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದು ಇದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಘಟನೆಯ ಬಳಿಕ ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಿ ಬಳಿಕ ಬಿಡುಗಡೆ ಮಾಡಲಾಯಿತು. ಇದೀಗ ನಟನ ವಿರುದ್ಧ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ. ಈ ಮಧ್ಯೆ ಪುಷ್ಪ 2 ಸಿನಿಮಾದ ನಿರ್ದೇಶಕ ಸುಕುಮಾರ್ ಚಿತ್ರರಂಗ ತೊರೆಯುವ ನಿರ್ಧಾರಕ್ಕೆ ಬಂದಿದ್ದು ಈ ವಿಚಾರ ಕೇಳಿ ಅಭಿಮಾನಿಗಳು ಶಾಕ್ ಆಗಿದ್ದಾರೆ.
ತಾವು ಚಿತ್ರರಂಗ ತೊರೆಯುವ ಬಗ್ಗೆ ಸ್ವತಃ ಸುಕುಮಾರ್ ತಿಳಿಸಿದ್ದಾರೆ. ಈ ವೇಳೆ ಪಕ್ಕದಲ್ಲೇ ಇದ್ದ ರಾಮ್ ಚರಣ್ ಕೂಡ ಈ ವಿಚಾತಿಳಿರದಿಂದ ಬೆಚ್ಚಿ ಬಿದ್ದರು. ಅವರು ಸಿನಿಮಾ ರಂಗ ತೊರೆಯಬಾರದು ಎನ್ನುವ ಆಗ್ರಹ ಜೋರಾಗಿದೆ.
ಹೈದರಾಬಾದ್ನ ಈವೆಂಟ್ ಒಂದರಲ್ಲಿ ಸುಕುಮಾರ್ ಭಾಗಿ ಆಗಿದ್ದರು. ಈ ವೇಳೆ ಅವರಿಗೆ ‘ನೀವು ಏನನ್ನು ತೊರೆಯಲು ಬಯಸುತ್ತೀರಿ’ ಎಂದು ಕೇಳಲಾಯಿತು. ಇದಕ್ಕೆ ಅವರು ಉತ್ತರವಾಗಿ ‘ಸಿನಿಮಾ’ ಎಂದಿದ್ದಾರೆ ಸುಕುಮಾರ್. ಇದನ್ನು ಕೇಳಿ ಎಲ್ಲರೂ ಶಾಕ್ ಆಗಿದ್ದಾರೆ. ಆಗ ಅಲ್ಲಿದ್ದವರು, ‘ನೀವು ಚಿತ್ರರಂಗ ತೊರೆಯಬಾರದು ಎಂದು ಹೇಳಿದ್ದಾರೆ. ಈ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದೆ.
ಅಲ್ಲು ಅರ್ಜುನ್ ಅವರು ಸದ್ಯ ವಿವಾದದ ಮೂಲಕ ಸುದ್ದಿ ಆಗಿದ್ದಾರೆ. ಅವರ ನಟನೆಯ ‘ಪುಷ್ಪ 2’ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವಾಗಲೇ ಬಂಧನಕ್ಕೆ ಒಳಗಾಗಬೇಕಾಯಿತು. ಇದು ಅವರಿಗೆ ಸಾಕಷ್ಟು ನೋವನ್ನುಂಟು ಮಾಡಿದೆ
ಅಲ್ಲು ಅರ್ಜುನ್ ಹಾಗೂ ಸುಕುಮಾರ್ ಮಧ್ಯೆ ಒಳ್ಳೆಯ ಗೆಳೆತನ ಇದೆ. ಇಬ್ಬರೂ ಹಲವು ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ಈಗ ಅಲ್ಲು ಅರ್ಜುನ್ ಅವರು ಸಂಕಷ್ಟು ಅನುಭವಿಸುತ್ತಿರುವ ವಿಚಾರ ಅವರಿಗೆ ನೋವು ತಂದಿದೆ. ಮುಂದೇನು ಎನ್ನುವ ಪ್ರಶ್ನೆ ಅವರನ್ನು ಬಲವಾಗಿ ಕಾಡುತ್ತಿದೆ. ಈ ಸಂಕಷ್ಟದಿಂದ ಅಲ್ಲು ಅರ್ಜುನ್ ಹೊರಬರಲಿ ಎಂದು ಸುಕುಮಾರ್ ಅವರು ಬಯಸುತ್ತಿದ್ದಾರೆ. ಜೊತೆಗೆ ತಾವು ಚಿತ್ರರಂಗ ತೊರೆಯುವ ನಿರ್ಧಾರವನ್ನು ಮಾಡಿದ್ದಾರೆ.