ನವದೆಹಲಿ ರೈಲು ನಿಲ್ದಾಣದಲ್ಲಿ ಪ್ರಯಾಗರಾಜ್ ಮಹಾ ಕುಂಭಕ್ಕೆ ಹೋಗಲು ವಿವಿಧ ರೈಲುಗಳನ್ನು ಹತ್ತಲು ಭಾರಿ ಜನಸಮೂಹ ಪ್ರಯತ್ನಿಸುತ್ತಿದ್ದಾಗ ಕಾಲ್ತುಳಿತ ಸಂಭವಿಸಿದೆ. ಈ ಅಪಘಾತದಲ್ಲಿ 18 ಜನರು ಸಾವನ್ನಪ್ಪಿದರು ಮತ್ತು ಡಜನ್ಗಟ್ಟಲೆ ಜನರು ಗಾಯಗೊಂಡರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಎಲ್ಎನ್ಜೆಪಿ ಮತ್ತು ಲೇಡಿ ಹಾರ್ಡಿಂಜ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಲ್ಎನ್ಜೆಪಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಎಲ್ಲಾ ಗಾಯಾಳುಗಳ ಸ್ಥಿತಿ ಸ್ಥಿರವಾಗಿದೆ. ಘಟನೆಯ ನಂತರ ರೈಲು ನಿಲ್ದಾಣದಲ್ಲಿ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ನಿಲ್ದಾಣದ ಆವರಣದಲ್ಲಿ ಭದ್ರತಾ ಪಡೆಗಳ ಒಂದು ಕಂಪನಿಯನ್ನು ನಿಯೋಜಿಸಲಾಗಿದೆ. ಮೆಟ್ರೋ ಭದ್ರತೆಯಲ್ಲಿ ತೊಡಗಿರುವ ಸಿಐಎಸ್ಎಫ್ ಕಂಪನಿಯನ್ನು ರೈಲ್ವೇ ಭದ್ರತೆಗಾಗಿ ನಿಯೋಜಿಸಲಾಗಿದೆ.
ಈ ಬಗ್ಗೆ ಜಂಟಿ ಪೊಲೀಸ್ ಆಯುಕ್ತ ವಿಜಯ್ ಸಿಂಗ್ ಮಾತನಾಡಿ, ದೆಹಲಿ ರೈಲು ನಿಲ್ದಾಣದ ಭದ್ರತೆಗಾಗಿ ಎಂಟು ಕಂಪನಿಗಳ ಅರೆಸೈನಿಕ ಪಡೆಗಳನ್ನು ನಿಯೋಜಿಸಲಾಗಿದೆ. ಜೊತೆಗೆ 80 ಸಿಬ್ಬಂದಿಯನ್ನು ಒಳಗೊಂಡ ಮೆಟ್ರೋ ಪೊಲೀಸ್ ಕಂಪನಿಯನ್ನು ನಿಯೋಜಿಸಲಾಗಿದೆ. ಇದಲ್ಲದೆ, ಮೆಟ್ರೋದಿಂದ ಮೂವರು ಇನ್ಸ್ಪೆಕ್ಟರ್ಗಳು ಮತ್ತು ಒಬ್ಬ ಎಸಿಪಿಯನ್ನು ನಿಯೋಜಿಸಲಾಗಿದೆ. ರೈಲ್ವೇ ಪೊಲೀಸ್ ಮತ್ತು ಜಿಆರ್ಪಿಯ ಪ್ರತ್ಯೇಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಎಂಟರಿಂದ ಹತ್ತು ರೈಲ್ವೇ ಪೊಲೀಸ್ ಠಾಣೆಗಳ ಮುಖ್ಯಸ್ಥರನ್ನು ನಿಯೋಜಿಸಲಾಗಿದೆ. ದೆಹಲಿ ಪೊಲೀಸ್ ಠಾಣೆ ಮುಖ್ಯಸ್ಥರನ್ನು ಸಹ ಹತ್ತಿರದಲ್ಲೇ ನಿಯೋಜಿಸಲಾಗಿದೆ ಎಂದರು.
ಸಂಪತ್ತು ನಿಮ್ಮನ್ನು ಹುಡುಕಿಕೊಂಡು ಬರಬೇಕಾ.? ಹಾಗಿದ್ರೆ ಈ ದಿನಗಳಲ್ಲಿ ಪೊರಕೆ ಖರೀದಿಸಬಾರದು.!
ಇದಲ್ಲದೆ ಪ್ರತಿ ಪ್ಲಾಟ್ಫಾರ್ಮ್, ಪಾದಚಾರಿ ಸೇತುವೆ ಮತ್ತು ಹೊರಗೆ ಒಂದು ಕಂಪನಿಯನ್ನು ನಿಯೋಜಿಸಲಾಗಿದೆ. ಒಂದು ಕಂಪನಿಯಲ್ಲಿ 80 ರಿಂದ 85 ಭದ್ರತಾ ಸಿಬ್ಬಂದಿಗಳಿದ್ದಾರೆ. ಅಲ್ಲದೆ, ರೈಲ್ವೇ ನಿಲ್ದಾಣದ ಹೊರಗೆ ಮತ್ತು ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ. ರೈಲು ನಿಲ್ದಾಣದ ಬಳಿ ವಾಹನಗಳನ್ನು ಅನುಮತಿಸಲಾಗುವುದಿಲ್ಲ. ಕುಂಭಮೇಳಕ್ಕೆ ಹೋಗುವ ರೈಲುಗಳು 12, 13 ಮತ್ತು 14ನೇ ಪ್ಲಾಟ್ಫಾರ್ಮ್ಗಳಿಂದ ಹೊರಡುತ್ತಿವೆ. ಇಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಪ್ರಯಾಗ್ರಾಜ್ಗೆ ಹೋಗುವ ರೈಲುಗಳಿಗೆ ವಿಶೇಷ ಗಮನ ನೀಡಲಾಗುತ್ತಿದೆ ಎಂದು ತಿಳಿಸಿದರು.
ಪ್ರಯಾಗ್ರಾಜ್ನಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಜನಸಂದಣಿ ಸೇರುತ್ತಿರುವ ಹಿನ್ನೆಲೆ ಮುಂದಿನ ಸೂಚನೆ ಬರುವವರೆಗೂ ರೈಲ್ವೆ ಎಲ್ಲಾ ವಿಐಪಿ ಶಿಷ್ಟಾಚಾರ ರದ್ದು ಮಾಡಿದೆ. ಪ್ರಯಾಗ್ರಾಜ್ನಲ್ಲಿರುವ ರೈಲ್ವೆ ವಿಶ್ರಾಂತಿ ಗೃಹದ ಎಲ್ಲಾ ಮುಂಗಡ ಬುಕಿಂಗ್ ಬಂದ್ ಮಾಡಿದ್ದು, ರೈಲ್ವೆ ಅಧಿಕಾರಿಗಳು ಪ್ರಯಾಗ್ರಾಜ್ಗೆ ಭೇಟಿ ನೀಡುತ್ತಿದ್ದಾರೆ. ವಿಐಪಿಗಳ ಶಿಷ್ಟಾಚಾರದಲ್ಲಿ ಕರ್ತವ್ಯ ನಿರ್ವಹಿಸುವ ರೈಲ್ವೆ ನೌಕರರು ಮತ್ತು ಭದ್ರತಾ ಸಿಬ್ಬಂದಿಯನ್ನು ಜವಬ್ದಾರಿಯಿಂದ ವಿಮುಕ್ತಗೊಳಿಸಲಾಗುತ್ತಿದೆ.