ನವದೆಹಲಿ: ಇಂದಿನಿಂದ 5 ದಿನಗಳ ಕಾಲ ಸಂಸತ್ ವಿಶೇಷ ಅಧಿವೇಶನ ನಡೆಯಲಿದೆ. ಚಂದ್ರಯಾನ-3 ಯಶಸ್ವಿ ಬಳಿಕ ಭಾರತ ವಿಶ್ವದ ಗಮನ ಸೆಳೆದಿದೆ. ಚಂದ್ರನ ಅಂಗಳದಲ್ಲಿ ಭಾರತದ ರಾಷ್ಟ್ರಧ್ವಜ ಹಾರುತ್ತಿದೆ. ಚಂದ್ರಯಾನ-3 ನಮ್ಮ ತಿರಂಗವನ್ನು ಎತ್ತಿ ಹಿಡಿದಿದೆ. ಶಿವಶಕ್ತಿ ಪಾಯಿಂಟ್ ಹೊಸ ಸ್ಫೂರ್ತಿಯ ಕೇಂದ್ರವಾಗಿದೆ. ಜಗತ್ತು, ಅಂತಹ ಸಾಧನೆಯನ್ನು ಮಾಡಿದಾಗ, ಅದನ್ನು ಆಧುನಿಕತೆ, ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಜೋಡಿಸುವ ಮೂಲಕ ನೋಡಲಾಗುತ್ತದೆ. ಈ ಸಾಧನೆಯಿಂದ ಹಲವು ಅವಕಾಶಗಳು ಭಾರತದ ಬಾಗಿಲುಗಳನ್ನ ತಟ್ಟುತ್ತವೆ.
ಅಡುಗೆಗೆ ಸಾಸಿವೆ ಎಣ್ಣೆಯನ್ನು ಬಳಸುವುದರಿಂದ ಸಿಗುವ ಪ್ರಯೋಜನಗಳೇನು ಗೊತ್ತಾ..?
ಇಸ್ರೋ ವಿಜ್ಞಾನಿಗಳ ಸಾಧನೆ ಎಲ್ಲರಿಗೂ ಸ್ಫೂರ್ತಿ ಎಂದು ಸಂಸತ್ ಭವನದ ಬಳಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು. ಇನ್ನೂ ವಿಶ್ವಕರ್ಮ ಜಯಂತಿ ಅಂಗವಾಗಿ ವಿಶ್ವಕರ್ಮ ಯೋಜನೆ ಜಾರಿ ಮಾಡಲಾಗಿದೆ. ಈ ಯೋಜನೆಯಿಂದ ಕುಶಲಕರ್ಮಿಗಳಿಗೆ ಆರ್ಥಿಕವಾಗಿ ನೆರವಾಗಲಿದೆ. ಹೊಸ ಸಂಸತ್ ಭವನದಲ್ಲಿ ವಿಶೇಷ ಅಧಿವೇಶನ ನಡೆಯಲಿದೆ. ಪ್ರತಿಪಕ್ಷಗಳು ಸುಗಮ ಕಲಾಪಕ್ಕೆ ಸಹಕಾರ ನೀಡುವ ಭರವಸೆ ಇದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.
