CSK ವಿರುದ್ಧದ ಗೆಲುವಿನ ಬಳಿಕ ಅಂಕಪಟ್ಟಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಅಗ್ರ ಸ್ಥಾನಕ್ಕೆ ಜಿಗಿದಿದೆ. 34 ಪಂದ್ಯಗಳ ಮುಕ್ತಾಯದ ವೇಳೆಗೆ ಆರ್ಆರ್ ಮೊದಲ ಸ್ಥಾನದಲ್ಲಿದ್ದರೆ, ಕೆಕೆಆರ್ ದ್ವಿತೀಯ ಸ್ಥಾನದಲ್ಲಿದೆ. ಅದರಂತೆ ನೂತನ ಪಾಯಿಂಟ್ಸ್ ಟೇಬಲ್ ಈ ಕೆಳಗಿನಂತಿದೆ…
ಕ್ರೂರಿಗೆ ತಕ್ಕ ಶಿಕ್ಷೆಯಾಗಲಿ: ನೇಹಾ ಸಾವಿನ ಬಗ್ಗೆ ಧ್ರುವ ಸರ್ಜಾ ಆಕ್ರೋಶ!
ರಾಜಸ್ಥಾನ್ ರಾಯಲ್ಸ್ ಇದುವರೆಗೆ 7 ಪಂದ್ಯಗಳನ್ನಾಡಿದ್ದು, ಇದರಲ್ಲಿ 6 ಮ್ಯಾಚ್ನಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 12 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.677.
6 ಪಂದ್ಯಗಳಲ್ಲಿ 4 ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಒಟ್ಟು 8 ಅಂಕಗಳನ್ನು ಸಂಪಾದಿಸಿದೆ. ಅಲ್ಲದೆ +1.399 ನೆಟ್ ರನ್ ಹೊಂದುವ ಮೂಲಕ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ.
7 ಪಂದ್ಯಗಳಲ್ಲಿ 4 ಜಯ ಹಾಗೂ 3 ಸೋಲಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೂರನೇ ಸ್ಥಾನದಲ್ಲಿದೆ. ಒಟ್ಟು 8 ಅಂಕ ಹೊಂದಿರುವ ಸಿಎಸ್ಕೆ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.529.
ಸನ್ರೈಸರ್ಸ್ ಹೈದರಾಬಾದ್ ತಂಡವು 6 ಪಂದ್ಯಗಳಲ್ಲಿ 4 ಜಯ ಸಾಧಿಸಿದ್ದು, ಇದೀಗ 8 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ ಎಸ್ಆರ್ಹೆಚ್ ತಂಡದ ನೆಟ್ ರನ್ ರೇಟ್ +0.502.
ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಆಡಿರುವ 7 ಪಂದ್ಯಗಳಲ್ಲಿ 4 ಜಯ ಸಾಧಿಸಿರುವ ಎಲ್ಎಸ್ಜಿ ಒಟ್ಟು 8 ಅಂಕಗಳೊಂದಿಗೆ +0.123 ನೆಟ್ ರನ್ ರೇಟ್ ಹೊಂದಿದೆ
7 ಪಂದ್ಯಗಳಲ್ಲಿ 3 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -0.074 ನೆಟ್ ರನ್ ರೇಟ್ನೊಂದಿಗೆ 6 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ
ಏಳು ಪಂದ್ಯಗಳಲ್ಲಿ 3 ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡವು 6 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡದ ನೆಟ್ ರನ್ ರೇಟ್ -0.133.
7 ಮ್ಯಾಚ್ಗಳಲ್ಲಿ 3 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 6 ಅಂಕಗಳನ್ನು ಹೊಂದಿದ್ದು, ಈ ಮೂಲಕ 8ನೇ ಸ್ಥಾನ ಅಲಂಕರಿಸಿದೆ. ಗುಜರಾತ್ ಟೈಟಾನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -1.303.
ಪಂಜಾಬ್ ಕಿಂಗ್ಸ್ ತಂಡವು 8ನೇ ಸ್ಥಾನದಲ್ಲಿದ್ದು, ಆಡಿರುವ 7 ಪಂದ್ಯಗಳಲ್ಲಿ 2 ಗೆಲುವು ಸಾಧಿಸಿ 4 ಅಂಕಗಳನ್ನು ಸಂಪಾದಿಸಿದೆ. ಪಂಜಾಬ್ ಕಿಂಗ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.133
ಆರ್ಸಿಬಿ ತಂಡವು ಇದುವರೆಗೆ 7 ಪಂದ್ಯಗಳನ್ನಾಡಿದ್ದು, ಇದರಲ್ಲಿ 6 ಮ್ಯಾಚ್ನಲ್ಲಿ ಸೋತಿದೆ. ಈ ಮೂಲಕ ಕೇವಲ 2 ಅಂಕ ಸಂಪಾದಿಸಿರುವ ಆರ್ಸಿಬಿ ಅಂಕಪಟ್ಟಿಯಲ್ಲಿ 10ನೇ ಸ್ಥಾನಕ್ಕೆ ಕುಸಿದಿದೆ.