ಬೆಳಗಾವಿ: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.
ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರೊಟೆಸ್ಟ್ ನಡೆದಿದ್ದು, ಬೆಳೆ ಪರಿಹಾರ ನೀಡಬೇಕು. ಎಂಎಸ್ ಪಿ ಶಾಸನಬಧ್ಧವಾಗಿ ಜಾರಿ ಆಗಬೇಕು. ಪ್ರತಿ ಲೀಟರ್ ಹಾಲಿಗೆ 50 ರೂಪಾಯಿ ದರ ನಿಗದಿಪಡಿಸಬೇಕು. ಮಹದಾಯಿ ಎತ್ತಿನಹೊಳೆ ಸೇರಿದಂತೆ ನೀರಾವರಿ ಯೋಜನೆಯ ಜಾರಿಯಾಗಬೇಕು ಎಂದು ಆಗ್ರಹಿಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ರೈತರು ಆಕ್ರೋಶ ಹೊರ ಹಾಕಿದ್ದಾರೆ.
ರೈತ ಸಂಘದಿಂದ ಸುವರ್ಣ ಸೌಧ ಮುತ್ತಿಗೆ ಯತ್ನ ಹಿನ್ನೆಲೆ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ರೈತರನ್ನು ಪೊಲೀಸರು ತಡೆದಿದ್ದಾರೆ. ಎರಡು ಬಸ್ ಗಳ ಮೂಲಕ ಪ್ರತಿಭಟನಾ ಸ್ಥಳಕ್ಕೆ ಕರೆದುಕೊಂಡು ಹೋಗಲು ಪೊಲೀಸರು ತಯಾರಿ ನಡೆಸಿದ್ದಾರೆ. ಈ ಹಿನ್ನೆಲೆ ಬಸ್ ಹತ್ತಿ ಪೊಲೀಸರು ತೆರಳಿದರು. ಈ ವೇಳೆ ಭಾರೀ ಬಂದೋಬಸ್ತ್ ಒದಗಿಸಲಾಗಿತ್ತು.