ಬೆಂಗಳೂರು: ಕೃಷಿ ಅಧಿಕಾರಿಗಳ ಸಹಾಯಕ ಕೃಷಿ ನಿರ್ದೇಶಕರ ಹಾಗೂ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಯಿಂದ ಕೃಷಿ ಅಧಿಕಾರಿಗಳ ಹುದ್ದೆಗೆ ಮುಂಬಡ್ತಿ ನೀಡಿದ ಮಾನ್ಯ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಯವರಿಗೆ ಕರ್ನಾಟಕ ಕೃಷಿ ಅಧಿಕಾರಿಗಳ ಸಂಘದ ವತಿಯಿಂದ ಇಂದು ಕೃಷಿ ಆಯುಕ್ತಾಲಯದಲ್ಲಿರುವ ಸಂಗಮ ಸಭಾಂಗಣದಲ್ಲಿ ಸನ್ಮಾನಿಸಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು, ಕಳೆದ 30 ವರ್ಷಗಳ ರಾಜಕೀಯ ಜೀವನದಲ್ಲಿ ಹಿರಿಯ ಹಾಗು ಕಿರಿಯ ಅಧಿಕಾರಿಗಳ ಜೊತೆ ಕೆಲಸ ಮಾಡಿದ ಅನುಭವವದಲ್ಲಿ, ನಾನು ಸನ್ಮಾನ ಹಾಗೂ ಅಭಿನಂದನೆ ಪಡೆಯಲು ಬಡ್ತಿ ನೀಡಿಲ್ಲ..
ನನ್ನ ಹಾಗೇ ನಿಮಗೂ ನಾಲ್ಕು ಮಂದಿಗೆ ಸಹಾಯ ಮಾಡಲು ಅವಕಾಶ ಸಿಗಲಿದೆ ಎನ್ನುವ ಉದ್ದೇಶದಿಂದ ಸುಮಾರು 538 ಮಂದಿಗೆ ಮುಂಬಡ್ತಿ ನೀಡಲಾಗಿದೆ ಎಂದು ಹೇಳಿದರು…
ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬುಕುಮಾರ್, ಆಯುಕ್ತ ವೈ.ಎಸ್.ಪಾಟೀಲ್, ನಿರ್ದೇಶಕ ಡಾ. ಜಿ.ಟಿ.ಪುತ್ರ, ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತ ಗಿರೀಶ್, ಹಾಗು ನಿರ್ದೇಶಕ ಶ್ರೀನಿವಾಸ್ ಕಾರ್ಯಕ್ರಮದಲ್ಲಿ ಉಪಸ್ಥಿತಿದ್ದರಿದ್ದರು..