ಬೆಂಗಳೂರು:ಸದನದಲ್ಲಿ ಮುಡಾ ಹಗರಣದ ಚರ್ಚೆಗೆ ಅವಕಾಶ ನಿರಾಕರಣೆಯಿಂದ ಕೆರಳಿರುವ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಕಲಾಪವನ್ನು ಗುರುವಾರಕ್ಕೆ ಮುಂದೂಡಿದ್ದರೂ ರಾತ್ರಿಯಿಡೀ ಸದನದಲ್ಲಿಯೇ ತಂಗಿರುವ ಶಾಸಕರು, ಭಿನ್ನ, ವಿಭಿನ್ನವಾಗಿ ಪ್ರತಿಭಟನೆ ನಡೆಸುವ ಮೂಲಕ ಗಮನ ಸೆಳೆದರು.
ವಿಧಾನಸಭೆಯಿಂದ ತಾಳ ಬಡಿಯುತ್ತಾ ಭಜನೆ ಮಾಡುತ್ತಲೇ ವಿಧಾನ ಪರಿಷತ್ಗೆ ತೆರಳಿದ ಬಿಜೆಪಿ ವಿಧಾನ ಪರಿಷತ್ ಸದಸ್ಯರು, ವಿಧಾನಸೌಧದ ಕಾರಿಡಾರ್ಗಳಲ್ಲೂ ವಿಠ್ಠಲ ಭಜನೆ ಮಾಡಿದರು. ವಿಪಕ್ಷ ನಾಯಕ ಆರ್ ಅಶೋಕ ವಾದ್ಯ ಮತ್ತು ಸಿಟಿ ರವಿ ತಾಳಕ್ಕೆ ಶಾಸಕ ಪ್ರಭು ಚವ್ಹಾಣ್ ಹೆಜ್ಜೆ ಹಾಕಿದರು. ಇನ್ನು ಭಜನೆ ಮೂಲಕವೇ ಕಾಂಗ್ರೆಸ್ ಸರ್ಕಾರಕ್ಕೆ ಲೆವಡಿ ಮಾಡಿದ ಬಿಜೆಪಿ, ‘ಸಮಾಜವಾದ ಅಂತಾರೆ ಮಜಾವನ್ನೇ ಮಾಡ್ತಾರೆ. ಸಮಾಜವಾದ ಅಂತಾರೆ ದಲಿತರ ಹಣವನ್ನು ನುಂಗ್ತಾರೆ ಎಂದು ಭಜನೆ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ ಟಾಂಗ್ ಕೊಟ್ಟರು.
ಇನ್ನು ಭಜನೆ ಮೂಲಕವೇ ಕಾಂಗ್ರೆಸ್ ಸರ್ಕಾರಕ್ಕೆ ಲೆವಡಿ ಮಾಡಿದ ಶಾಸಕರು, ‘ಸಮಾಜವಾದ ಅಂತಾರೆ ಮಜಾವನ್ನೇ ಮಾಡ್ತಾರೆ. ಸಮಾಜವಾದ ಅಂತಾರೆ ದಲಿತರ ಹಣವನ್ನು ನುಂಗ್ತಾರೆ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಟಾಂಗ್ ಕೊಟ್ಟರು.