ಕೋಲಾರ – ಏಡ್ಸ್ ಸೋಂಕಿತರಿಗೆ ಸರ್ಕಾರ ನೀಡಿರುವ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುನೀಲ್ ಎಸ್. ಹೊಸಮನಿ ರವರು ತಿಳಿಸಿದರು.
ಕಲ್ಟ್ ಸಿನಿಮಾ ಚಿತ್ರೀಕರಣ ವೇಳೆ ಡ್ರೋಣ್ ಗೆ ಹಾನಿ ಕೇಸ್: ಸಚಿವ ಜಮೀರ್ ಹೇಳಿದ್ದೇನು!?
ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೋಲಾರ ಸ್ವಯಂಸೇವಾ ಸಂಸ್ಥೆಗಳಾದ ಸೌಖ್ಯ ಸಂವೃದ್ಧಿ ಸಂಸ್ಥೆ, ಐವೈಡಿ-ಐಡಿಯು, ಸಮ್ಮಿಲನ ಸಂಸ್ಥೆ, ಕೋಲಾರ ಮತ್ತು ವಿವಿಧ ಕಾಲೇಜುಗಳು ಇವರ ಸಂಯುಕ್ತ ಆಶ್ರಯದಲ್ಲಿ ಟಿ.ಚೆನ್ನಯ್ಯ ರಂಗಮಂದಿರದಲ್ಲಿ ವಿಶ್ವ ಏಡ್ಸ್ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನನ್ನ ಆರೋಗ್ಯ ನನ್ನ ಹಕ್ಕು ಎಂಬ ಘೋಷ ವಾಕ್ಯದೊಂದಿಗೆ ಏಡ್ಸ್ ಸೋಂಕು ತಡೆಗಟ್ಟಲು ಜನಸಾಮಾನ್ಯರಲ್ಲಿ ಸೂಕ್ತ ಅರಿವು ಮೂಡಿಸಬೇಕು ಒಳ್ಳೆಯ ಆರೋಗ್ಯ ಹೊಂದಿರಬೇಕು ಎಂದರೆ ಕೆಟ್ಟ ಹವ್ಯಾಸಗಳನ್ನು ಬಿಟ್ಟು ಒಳ್ಳೆಯ ದಾರಿಯಲ್ಲಿ ನಡೆಯಬೇಕು. ಎಡ್ಸ್ನಿಂದ ಸೋಂಕಿತ ಹಾಗೂ ಕಳಂಕ, ತಾರತಮ್ಯಕ್ಕೊಳಗಾದ ವ್ಯಕ್ತಿಗಳಿಗೆ ನೈತಿಕ ಬೆಂಬಲವನ್ನು ಸೂಚಿಸಲು ಮರಣ ಹೊಂದಿದವರ ನೆನಪಿಗಾಗಿ ಮತ್ತು ಎಲ್ಲರೂ ಒಂದಾಗಿ ಎಡ್ಸ್ ವಿರುದ್ಧ ಹೋರಾಡುವಂತೆ ಪ್ರೇರೇಪಿಸುವ ಸಲುವಾಗಿ ಪ್ರತಿ ಡಿಸೇಂಬರ್ 1ರಂದು ಆಚರಿಸಲಾಗುತ್ತದೆ. ಸರ್ಕಾರವು ಹೆಚ್.ಐ.ವಿ ಸೋಂಕಿತರಿಗೆ ಹಲವಾರಿ ರೀತಿಯ ಯೋಜನೆಗಳನ್ನು ನೀಡುವುದರ ಮೂಲಕ ಹೆಚ್.ಐ.ವಿ ಸೋಂಕನ್ನು ತಡೆಗಟ್ಟಲು ಮುಂದಾಗುತ್ತಿದೆ ಎಂದು ತಿಳಿಸಿದರು.