ದೊಡ್ಡಬಳ್ಳಾಪುರ: AIN ಕನ್ನಡ ವರದಿ ಬೆನ್ನಲ್ಲೆ ಎಚ್ಚೆತ್ತುಕೊಂಡ ಅಧಿಕಾರಿಗಳು ಅಂಗನವಾಡಿ ಕೇಂದ್ರ ನಿರ್ಮಾಣ ಮಾಡಲು ಮುಂದಾಗಿದ್ದಾರೆ.ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಕುಸಿಯುವ ಹಂತಕ್ಕೆ ತಲುಪಿತ್ತು.
2022 ರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಡಿಎಂಎಫ್ ನಿಂದ 10 ಲಕ್ಷ ಮತ್ತು ನರೇಗಾ ಯೋಜಯಡಿ 5 ಲಕ್ಷ ರೂ ನೂತನ ಅಂಗಡಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿತ್ತು. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಂಗನವಾಡಿ ಕಟ್ಟಡ ನೆನೆಗುದಿಗೆ ಬಿದ್ದಿತ್ತು..
ನವೆಂಬರ್ 9 ರಂದು AIN ಕನ್ನಡ ಈ ಕುರಿತು ಸಂಪೂರ್ಣ ವರದಿ ಮಾಡಲಾಗಿತ್ತು.ಕೂಡಲೆ ಎಚ್ಚೆತ್ತುಕೊಂಡ ಅಧಿಕಾರಿಗಳು ಹಳೆಯ ಕಟ್ಟಡವನ್ನು ತೆರವು ಮಾಡಿ ಹೊಸ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದಾರೆ.
AIN ಕನ್ನಡಕ್ಕೆ ಗ್ರಾಮಸ್ಥರಿಂದ ಮೆಚ್ಚುಗೆ..!
ತಿರುಮಗೊಂಡನಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಕುಸಿಯುವ ಹಂತಕ್ಕೆ ತಲುಪಿತ್ತು.ಈ ಕುರಿತು ಗ್ರಾಮಸ್ಥ ಹರೀಶ್ ಕುಮಾರ್ ಮಾತನಾಡಿ ಹೊಸ ಕಟ್ಟಡ ನಿರ್ಮಾಣಕ್ಕೆ ಹಲವು ಬಾರಿ ಅಧಿಕಾರಿಗಳ ಬಳಿ ಮನವಿ ಮಾಡಿದ್ದೇವೆ. ಆದರೆ ಅಧಿಕಾರಿಗಳು ಸ್ಫಂದಿಸಲಿಲ್ಲ ಈ ಕುರಿತು AIN ಕನ್ನಡ ವರದಿ ಮಾಡಿತ್ತು. ಇದರಿಂದ ಅಧಿಕಾರಿಗಳು ಎಚ್ಚೆತ್ತು ಕಟ್ಟಡ ನಿರ್ಮಾಣ ಮಾಡಲು ಉತ್ಸಾಹ ತೋರಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು..
ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಕೊರತೆ -CDPO ಹೇಳಿದ್ದೇನು ..?
ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 10 ಲಕ್ಷ ಮತ್ತು ನರೇಗಾ ಯೋಜನೆಯಡಿ 5 ಲಕ್ಷ ಹಣ ಅನುದಾನ 2022 ರಲ್ಲಿ ಅನುದಾನ ಬಿಡುಗಡೆಯಾಗಿತ್ತು. ಆದರೆ ಡಿಎಂಎಫ್ ಅನುದಾನ ಕೊರತೆಯಿಂದ ಕಟ್ಟಡ ನಿರ್ಮಾಣ ಮಾಡಲು ಸಾಧ್ಯವಾಗಿರಲಿಲ್ಲ. ಆರು ತಿಂಗಳಲ್ಲಿ ಸುಸಜ್ಜಿತ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡುತ್ತೇವೆ ಎಂದು CDPO ರವಿಕುಮಾರ್ ಹೇಳಿದರು.