ಮುಂಬೈ:- ಏರ್ ಇಂಡಿಯಾ ಪೈಲಟ್ ಸೂಸೈಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಿಯಕರನಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಒಂದು ತಿಂಗಳ ಹಿಂದೆಯಷ್ಟೇ ಏರ್ ಇಂಡಿಯಾ ಪೈಲಟ್ ಆತ್ಮಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಆಕೆಯ ಪ್ರಿಯಕರನಿಗೆ ಮುಂಬೈ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.
ಮಾಂಸಾಹಾರ ಸೇವಿಸುವುದನ್ನು ನಿಲ್ಲಿಸುವಂತೆ ಪ್ರಿಯಕರ ಒತ್ತಡ ಹೇರಿದ ಪರಿಣಾಮ ಏರ್ ಇಂಡಿಯಾ ಪೈಲಟ್ ಸೃಷ್ಟಿ ತುಲಿ ಅಂಧೇರಿಯ ಮರೋಲ್ ಪ್ರದೇಶದಲ್ಲಿರುವ ‘ಕನಕಿಯಾ ರೈನ್ ಫಾರೆಸ್ಟ್’ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಕಳೆದ ನವೆಂಬರ್ 25ರಂದು ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಳು. ಘಟನೆ ಬೆಳಕಿಗೆ ಬಂದ ಮರುದಿನವೇ ಆಕೆಯ ಗೆಳೆಯನನ್ನ ಪೊಲೀಸರು ಬಂಧಿಸಿದ್ದರು. ಬಿಎನ್ಎಸ್ ಸೆಕ್ಷನ್ 108 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.
ಪ್ರಕರಣದ ವಿಚಾರಣೆಗಾಗಿ ಇಂದು ಆರೋಪಿಯನ್ನ ಮುಂಬೈನ ಸೆಷನ್ ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಟಿ.ಟಿ ಅಗ್ಲಾವ್ ಜಾಮೀನು ನೀಡಿ ಆದೇಶಿಸಿದ್ದಾರೆ