ನವದೆಹಲಿ: ಇಲ್ಲಿನ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿ ನಡೆದ ಛಾವಣಿ ಕುಸಿತದಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 6 ಮಂದಿ ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಘಟನೆಯಲ್ಲಿ ಪ್ರಾಣ ಕಳೆದುಕೊಂಡವರಿಗೆ 20 ಲಕ್ಷ ರೂ. ಅಲ್ಲದೇ ಗಾಯಾಳುಗಳಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಘೊಷಿಸಿದರು.
ಆಸ್ತಿ ತೆರಿಗೆ ಬಾಕಿದಾರರಿಗೆ ಮತ್ತೆ ಬಿಸಿ ಮುಟ್ಟಿಸಲು ಪ್ಲಾನ್..! 5 ಲಕ್ಷ ಆಸ್ತಿಗಳ ತೆರಿಗೆ ವಸೂಲಿಗೆ BBMP ಸಿದ್ಧತೆ
ನಡೆದಿದ್ದೇನು..?: ರಾಷ್ಟ್ರ ರಾಜಧಾನಿ ದೇಹಲಿಯಲ್ಲಿ ಭಾರೀ ಮಳೆಯಾಗುತ್ತಿದೆ. ಈ ನಡುವೆ ಇಂದು ಮುಂಜಾನೆ 5.30ರ ಸುಮಾರಿಗೆ ಟರ್ಮಿನಲ್ 1 ರಲ್ಲಿ ಛಾವಣಿ ಕುಸಿದಿದೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡರು. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಯಿತು.
ಪ್ರಕರಣದ ಕುರಿತು ತನಿಖೆ: ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ ಒಂದರಲ್ಲಿ ಸಂಭವಿಸಿದ ಅವಘಡದ ತನಿಖೆಗಾಗಿ ನಾಗರಿಕ ವಿಮಾನಯಾನ ಸಚಿವಾಲಯವು ತಂಡವನ್ನು ರಚಿಸಿದೆ. ಇಂದು ಬೆಳಗ್ಗೆ ಸಂಭವಿಸಿದ ಘಟನೆ ಬಗ್ಗೆ ಸ್ವತಃ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಣ್ಣಿಟ್ಟಿದ್ದಾರೆ. ಮೇಲ್ಛಾವಣಿ ಕುಸಿದು ಕೆಲವು ಕಾರುಗಳಿಗೂ ಹಾನಿಯಾಗಿದೆ.