ಮಂಡ್ಯ: ಐಶ್ವರ್ಯಗೌಡರ ವಂಚನೆ ಪ್ರಕರಣವನ್ನ ಸಿಬಿಐಗೆ ನೀಡಬೇಕೆಂದು ಮಾಜಿ ಶಾಸಕ ಅನ್ನದಾನಿ ಆಗ್ರಹಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಐಶ್ವರ್ಯಗೌಡ ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದವರು.
ಈಕೆ ಮಂಡ್ಯ ಜಿಲ್ಲೆಯಲ್ಲೂ ಹಲವರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ. ಅಮಾಯಕರನ್ನ ನಂಬಿಸಿ ಅವರಿಗೆ ಮೋಸ ಮಾಡಿದ್ದಾರೆ. ಈಕೆಯ ಈ ಮೋಸದ ಜಾಲಕ್ಕೆ ಕಾಂಗ್ರೆಸ್ನ ಒಂದಷ್ಟು ಮುಖಂಡರು ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ಹೇಳಿದ್ದಾರೆ.
SIM Card New Rules: ಹೊಸ ಸಿಮ್ ಖರೀದಿಸೋ ಪ್ಲಾನ್ʼನಲ್ಲಿದ್ದೀರಾ..? ಹಾಗಿದ್ರೆ ಈ ರೂಲ್ಸ್ ತಿಳಿಯಲೇಬೇಕು
ಸದ್ಯ ಮಳವಳ್ಳಿ ಶಾಸಕರಾಗಿರುವ ನರೇಂದ್ರಸ್ವಾಮಿಗೆ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಐಶ್ವರ್ಯಗೌಡ ಫಂಡಿಂಗ್ ಮಾಡಿದ್ದಾರೆ. ಐಶ್ವರ್ಯಗೌಡರನ್ನ ಮಂಪರು ಪರೀಕ್ಷೆಗೆ ಒಳಪಡಿಸಿದರೆ, ಎಲ್ಲಾ ವಿಚಾರಗಳು ಬೆಳಕಿಗೆ ಬರುತ್ತವೆ. ಐಶ್ವರ್ಯಗೌಡರ ವಂಚನೆ ಪ್ರಕರಣವನ್ನ ಸಿಬಿಐಗೆ ನೀಡಬೇಕೆಂದು ಮಾಜಿ ಶಾಸಕ ಅನ್ನದಾನಿ ಆಗ್ರಹಿಸಿದ್ದಾರೆ.