ಮುಂದಿನ ಮೂರು ಟೆಸ್ಟ್ ಪಂದ್ಯಗಳಿಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾರತ ತಂಡವನ್ನು ಪ್ರಕಟಿಸಿದೆ. ಆರಂಭಿಕ ಎರಡು ಪಂದ್ಯಗಳನ್ನು ಆಡಿದ್ದ ಬಹುತೇಕ ಅದೇ ಆಟಗಾರರನ್ನು ಉಳಿಸಿಕೊಂಡಿದೆ.
ವೈಯಕ್ತಿಕ ಕಾರಣಗಳಿಂದ ಆರಂಭಿಕ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದ ವಿರಾಟ್ ಕೊಹ್ಲಿ, ಇನ್ನುಳಿದ ಮೂರೂ ಪಂದ್ಯಗಳಿಂದಲೂ ದೂರ ಉಳಿಯಲು ನಿರ್ಧರಿಸಿದ್ದಾರೆ ಹಾಗೂ ಬಿಸಿಸಿಐ ಕೂಡ ಹಿರಿಯ ಆಟಗಾರನ ನಿರ್ಧಾರಕ್ಕೆ ಬೆಂಬಲ ಸೂಚಿಸಿದೆ.
ಇವರ ಸ್ಥಾನಕ್ಕೆ 27ರ ಪ್ರಾಯದ ಆಕಾಶ್ ದೀಪ್ಗೆ ಅವಕಾಶವನ್ನು ನೀಡಲಾಗಿದೆ. ಆಕಾಶ ದೀಪ್ ಒಬ್ಬ ವೇಗದ ಬೌಲರ್. ಇಂಗ್ಲೆಂಡ್ ವಿರುದ್ಧದ ಕೊನೆಯ 3 ಟೆಸ್ಟ್ ಪಂದ್ಯಗಳ ಭಾರತ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಪಡೆಯಬಹುದಾಗಿದೆ. ಭಾಗವಾಗಿರಬಹುದು.
27ರ ವರ್ಷದ ವೇಗದ ಬೌಲರ್ ಆಕಾಶ್ ದೀಪ್ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಮೂರು ಅನಧಿಕೃತ ಟೆಸ್ಟ್ ಪಂದ್ಯಗಳಿಂದ 13 ವಿಕೆಟ್ಗಳನ್ನು ಪಡೆದಿದ್ದರು. ಬಿಹಾರದಲ್ಲಿ ಜನಿಸಿದ್ದ ಆಕಾಶ್ ದೀಪ್ ಬಂಗಾಳದ ಪರವಾಗಿ ದೇಶಿ ಕ್ರಿಕೆಟ್ ಆಡುತ್ತಿದ್ದಾರೆ. ಆಕಾಶ್ 29 ಪ್ರಥಮ ದರ್ಜೆ ಪಂದ್ಯಗಳಲ್ಲಿ 103 ವಿಕೆಟ್ ಪಡೆದಿದ್ದಾರೆ. ಅಲ್ಲದೆ, ಇಂಡಿಯನ್ ಪ್ರೀಮಿಯರ್ ಲಿಗ್ (ಐಪಿಎಲ್) ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.