ಇಂದು RCB ಹಾಗೂ DC ನಡುವೆ ಪಂದ್ಯ ನಡೆಯಲಿದೆ. ಆದರೆ ರಿಷಬ್ ಪಂತ್ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಿದ್ದು ಬದಲಿ ನಾಯಕನನ್ನು ಫ್ರಾಂಚೈಸಿ ಘೋಷಿಸಿದೆ. ಆರ್ಸಿಬಿ ವಿರುದ್ಧ ರಿಷಬ್ ಪಂತ್ ಅನುಪಸ್ಥಿತಿಯಲ್ಲಿ ಅಕ್ಷರ್ ಪಟೇಲ್ ತಂಡದ ನಾಯಕತ್ವವನ್ನು ವಹಿಸಲಿದ್ದಾರೆ ಎಂದು ಡೆಲ್ಲಿ ಕ್ಯಾಪಿಟಲ್ಸ್ ಕೋಚ್ ರಿಕಿ ಪಾಂಟಿಂಗ್ ಖಚಿತಪಡಿಸಿದ್ದಾರೆ.
RCB V/s DC ಪಂದ್ಯಕ್ಕೆ ಮಳೆ ಕಾಟ… ವರುಣ ಅಬ್ಬರಿಸಿದರೆ ಫಲಿತಾಂಶ ನಿರ್ಧರಿಸುವುದು ಹೇಗೆ!?
ಅಕ್ಸರ್ ಅತ್ಯಂತ ಅನುಭವಿ ಮತ್ತು ಸಂವೇದನಾಶೀಲ ಆಟಗಾರ, ಅವರು ಆಟವನ್ನು ಚೆನ್ನಾಗಿ ಅರ್ಥಮಾಡಿಕೊಳ್ಳುತ್ತಾರೆ. ಆರ್ಸಿಬಿ ವಿರುದ್ಧದ ಪಂದ್ಯಕ್ಕೆ ಆಲ್ರೌಂಡರ್ ನಾಯಕನ ಪಾತ್ರವನ್ನು ವಹಿಸಿಕೊಳ್ಳಲು ಉತ್ಸುಕನಾಗಿದ್ದಾರೆ ಎಂದು ಹೇಳಿದ್ದಾರೆ.
ಐಪಿಎಲ್ ನಿಯಮವನ್ನು ಸತತವಾಗಿ ಉಲ್ಲಂಘಿಸಿದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಬ್ ಪಂತ್ ವಿರುದ್ಧ ಬಿಸಿಸಿಐ ಕಠಿಣ ಕ್ರಮ ಕೈಗೊಂಡಿದೆ. ಅದರಂತೆ ನಾಯಕ ರಿಷಬ್ ಪಂತ್ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗಿದ್ದಾರೆ. ಇದರಿಂದಾಗಿ ಪಂತ್ ಆರ್ಸಿಬಿ ವಿರುದ್ಧದ ಬಹಳ ಮುಖ್ಯವಾದ ಪಂದ್ಯವನ್ನು ಆಡುವಂತಿಲ್ಲ ಎಂದಿದ್ದಾರೆ.