ಕಲಬುರಗಿ:- ಜಿಲ್ಲೆ ಆಳಂದ ಮತಕ್ಷೇತ್ರದ ಶಾಸಕ ಬಿಆರ್ ಪಾಟೀಲ್ ಮುಖ್ಯಮಂತ್ರಿಗಳ ಸಲಹೆಗಾರರಾಗಿ ನೇಮಕ ಮಾಡಲಾಗಿದೆ..ಕರ್ನಾಟಕ ರಾಜ್ಯಪಾಲರ ಆದೇಶದ ಅನುಸಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ..
ಮಾತ್ರವಲ್ಲ ಸಂಪುಟ ದರ್ಜೆ ಸಚಿವ ಸ್ಥಾನಮಾನ ನೀಡುವಂತೆ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ..ವಿಶೇಷ ಅಂದ್ರೆ ಸಚಿವರು ತಮ್ಮ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಹಲವು ವಿಚಾರದಲ್ಲಿ ಗಮನ ಕೊಡ್ತಿಲ್ಲ ಅಂತ ಬಹಿರಂಗವಾಗಿ ಅಸಮಧಾನ ತೋಡಿಕೊಂಡಿದ್ದರು.ಈ ವಿಚಾರ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು..