ಉಡುಪಿ:- ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಕೈಗೊಂಡಿರುವ ಕಾಮಗಾರಿಗಳ ಕುರಿತು ವಿಳಂಬ ಧೋರಣೆಯನ್ನು ತಾಳದೆ,
ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ತಪ್ಪಿದ್ದಲ್ಲಿ ಅಂತಹ ಅಧಿಕಾರಿಗಳ ಮೇಲೆ ನಿರ್ದಾಕ್ಷೀಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದ್ದಾರೆ.
NPCI guidelines: ಒಂದು ವರ್ಷದಿಂದ ಯಾವುದೇ ವಹಿವಾಟು ನಡೆಸದ ಯುಪಿಐ ಐಡಿ, ಯುಪಿಐ ನಂಬರ್ ಡೀ ಆ್ಯಕ್ಟಿವೇಟ್: ಕಾರಣ!
ಬೈಂದೂರು ತಾಲೂಕಿನ ಮರವಂತೆಯಲ್ಲಿ ಹೊರ ಬಂದರು, ಗಂಗೊಳ್ಳಿ ಮೀನುಗಾರಿಕೆ ಬಂದರಿನ ಮರು ನಿರ್ಮಾಣ ಹಾಗೂ ಗಂಗೊಳ್ಳಿ ಮೀನುಗಾರಿಕಾ ಬಂದರು ಹಾಗೂ ಕೋಡಿ ಜೆಟ್ಟಿಯ ನ್ಯಾವಿಗೇಷನ್ ಚಾನೆಲ್ನಲ್ಲಿ ಹೂಳೆತ್ತುವ ಕಾಮಗಾರಿಗಳನ್ನು ತಾಂತ್ರಿಕ ಸಮಸ್ಯೆಗಳಿಂದಾಗಿ ಕೈಗೊಳ್ಳದೆ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.