ನವದೆಹಲಿ;– ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಣಿಪುರದ ಪರಿಸ್ಥಿತಿ ಕುರಿತು ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸರ್ವಪಕ್ಷಗಳ ಸಭೆ ನಡೆಸಲಿದ್ದಾರೆ.
ಮೇ 3 ರಿಂದ ಮಣಿಪುರದಲ್ಲಿ ಬೆಂಕಿ ಹಚ್ಚುವಿಕೆಯಂತಹ ಘಟನೆಗಳು ನಡೆಯುತ್ತಿದ್ದು, ಶಾಂತಿಗೆ ಭಂಗ ತರುವುದನ್ನು ತಡೆಯುವ ಪ್ರಯತ್ನದಲ್ಲಿ ರಾಜ್ಯ ಸರ್ಕಾರವು ತಕ್ಷಣವೇ ಜಾರಿಗೆ ಬರುವಂತೆ ಜೂನ್ 25 ರವರೆಗೆ ಇಂಟರ್ನೆಟ್ ಮೇಲಿನ ನಿಷೇಧವನ್ನು ಇನ್ನೂ ಐದು ದಿನಗಳವರೆಗೆ ವಿಸ್ತರಿಸಿದೆ. ರಾಜ್ಯದಲ್ಲಿನ ಅಶಾಂತಿಯ ದೃಷ್ಟಿಯಿಂದ ಡೇಟಾ ಸೇವೆಗಳನ್ನು ಸಹ ನಿಷೇಧಿಸಲಾಗಿದೆ. ಮಣಿಪುರದಲ್ಲಿ ಮೇ 3 ರಂದು ಎಲ್ಲಾ ಬುಡಕಟ್ಟು ವಿದ್ಯಾರ್ಥಿಗಳ ಒಕ್ಕೂಟ ಮೇಟಿ ಸಮುದಾಯವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸುವ ಬೇಡಿಕೆಯನ್ನು ಪ್ರತಿಭಟಿಸಲು ಆಯೋಜಿಸಿದ್ದ ರ್ಯಾಲಿಯಲ್ಲಿ ಘರ್ಷಣೆಗಳು ಉಂಟಾದ ನಂತರ ಹಿಂಸಾಚಾರಗಳು ನಡೆಯುತ್ತಿವೆ.

ಹೀಗಾಗಿ ಮಣಿಪುರದ ಪರಿಸ್ಥಿತಿ ಕುರಿತು ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಷ್ಟ್ರ ರಾಜಧಾನಿಯಲ್ಲಿ ಸರ್ವಪಕ್ಷಗಳ ಸಭೆ ನಡೆಸಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಸಭೆ ನಿಗದಿಯಾಗಿದೆ.
