ಹಾಸನ: ಹೊಗಳಿಕೆಯಿಂದ ಎಲ್ಲಾ ರಾಜಯಕೀಯ ಪಕ್ಷಗಳು ಹಾಳಾಗಿ ಹೋಗಿವೆ. ಪಕ್ಷ ರಾಜಕಾರಣ ಹಾಳಾಗಿ, ವ್ಯಕ್ತಿ ರಾಜಕಾರಣ ಮೆರೆಯುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಬೇಸರ ಹೊರಹಾಕಿದರು. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು,
ಹೊಗಳಿಕೆಯಿಂದ ಎಲ್ಲಾ ರಾಜಕೀಯ ಪಕ್ಷಗಳು ಹಾಳಾಗಿ ಹೋಗಿವೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ವಾದ, ವಿವಾದ, ಪ್ರತಿವಾದ ಟೀಕೆ ಸಹಜ. ಅದು ಇಲ್ಲದೇ ಇದ್ದರೇ ಚಮಚಾಗಿರಿ ಮಾಡಿಕೊಂಡು ಕೂರಬೇಕಾಗುತ್ತದೆ. ಯಾರನ್ನೋ ಮೆಚ್ಚಿಸಲು ನೀನು ಸತ್ಯವಂತ ಎಂದು ಹೇಳೋದು ಎಷ್ಟು ಸರಿ? ಎಂದು ಪ್ರಶ್ನಿಸಿದರು.
Ladyfinger Benefits: ಮಧುಮೇಹಿಗಳಿಗೆ ಬೆಂಡೆಕಾಯಿ ಸೇವನೆ ಯಾವ ರೀತಿ ಸಹಾಯ ಮಾಡುತ್ತೆ ಗೊತ್ತಾ..?
ಭ್ರಷ್ಟನನ್ನ ಭ್ರಷ್ಟ ಎಂದೇ ಹೇಳಬೇಕು. ಹಾಗೆ ಹೇಳಿದರೆ ವಿಶ್ವನಾಥ್ ಎಲ್ಲರ ಬಗ್ಗೆನು ಮಾತಾಡ್ತಾರೆ ಅಂತಾರೆ. ಜನತಂತ್ರ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಇಲ್ಲದೇ ಬರೀ ಹೊಗಳಿಕೆ ಇದ್ದರೆ ಹೇಗೆ? ಎಲ್ಲಾ ರಾಜಕೀಯ ಪಕ್ಷಗಳು ಹೊಗಳಿಕೆಯಿಂದಲೇ ಹಾಳಾಗಿ ಹೋಗಿವೆ. ಒಂದು ಪಕ್ಷದ ಕಾರ್ಯಕರ್ತರು ನಾಯಕ ಏನೇ ತಪ್ಪು ಮಾಡಿದರೂ ಅವನನ್ನು ಹೊಗಳುತ್ತಾರೆ. ನೀನು ತಪ್ಪು ಮಾಡಿದ್ದೀಯ ಅಂತ ಹೇಳುವುದಿಲ್ಲ. ಹಾಗಾಗಿ ಇವತ್ತು ಪಕ್ಷ ರಾಜಕಾರಣ ಹಾಳಾಗಿದೆ ಎಂದು ಅಸಮಾಧಾನ ಹೊರಹಾಕಿದರು.