ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ (Yathindra siddaramaiah) ನೀಡಿದ ವಿವಾದಾತ್ಮಕ ಹೇಳಿಕೆಯನ್ನ ಬಿಜೆಪಿ ನಾಯಕರು (BJP Leaders) ತೀವ್ರವಾಗಿ ಖಂಡಿಸಿದ್ದಾರೆ. ಅಲ್ಲದೇ ಯತೀಂದ್ರ ವಿರುದ್ಧ ಕೇಸ್ ದಾಖಲಿಸುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ದಾಖಲೆ ಮಟ್ಟದ ತಾಪಮಾನ : ಇನ್ನೆರಡು ದಿನಗಳಲ್ಲಿ 40 ಡಿಗ್ರಿಗೆ ಏರಿಕೆ ಸಾಧ್ಯತೆ
ಬೆಂಗಳೂರಿನಲ್ಲಿಂದು ಬಿಜೆಪಿ-ಜೆಡಿಎಸ್ ಮೈತ್ರಿ (BJP JDS Alliance) ಸಮ್ಮಿಲನ ಸಭೆಗೆ ಉಭಯ ಪಕ್ಷಗಳ ನಾಯಕರು ಆಗಮಿಸುತ್ತಿದ್ದಾರೆ. ಸಭೆಗು ಮುನ್ನ ಬಿಜೆಪಿ ನಾಯಕರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಯತೀಂದ್ರ ವಿರುದ್ಧ ಕಿಡಿ ಕಾರಿದ್ದಾರೆ
ಅಪ್ಪನ ಹೆಸರಲ್ಲಿ ಅಧಿಕಾರಕ್ಕೆ ಬಂದವರು ಹೀಗೆ. ಯತೀಂದ್ರ ಎಂದಾದ್ರೂ ಪಕ್ಷದ ಕೆಲಸ ಮಾಡಿದ್ದಾರಾ? ಅಮಿತ್ ಶಾ1982ರಲ್ಲಿ ಬೂತ್ ಅಧ್ಯಕ್ಷ ಆಗಿದ್ದರು. ಆಗ ಇವರಪ್ಪ ಇನ್ನೂ ಎಂಎಲ್ಎ ಕೂಡ ಆಗಿರಲಿಲ್ಲ. ಅಪ್ಪನ ದುಡ್ಡಿನಿಂದ ಶಾಸಕ ಆದವರು ಯತೀಂದ್ರ. ಆದ್ರೆ ನಾವು ವಿದ್ಯಾರ್ಥಿಗಳಾಗಿದ್ದಾಗಲೇ ನಾಯಕರಾಗಿದ್ದೆವು. ನಮ್ಮ ಮೇಲೂ ಸುಳ್ಳು ಕೇಸ್ ಹಾಕಿ ಗೂಂಡಾ ಕಾಯ್ದೆ ಹಾಕಿದ್ದರು. ಹಾಗಾದ ಮಾತ್ರಕ್ಕೆ ನಾನೂ ಗೂಂಡಾನಾ? ಅಪ್ಪನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಸಾಮಾನ್ಯ ಕಾರ್ಯಕರ್ತರ ಕಷ್ಟ ಹೇಗೆ ತಿಳಿಯುತ್ತದೆ?