ವಿಧಾನಸೌಧ: ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರದ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಇಂದು ಸಂಸದರಿಂದ ಸಿಎಂ ವಿರುದ್ಧ ದಂಗೆ ಎದ್ದಿದ್ದಾರೆ.
ವಿಧಾನಸೌಧಧ ಗಾಂಧಿ ಪ್ರತಿಮೆ ಎದುರು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಮೌನ ಪ್ರತಿಭಟನೆ ನಡೆಸುತ್ತಿದ್ದು ಕೋಟಾಗೆ ಮೇಲ್ಮನೆ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ, ಶಾಸಕ ಸುರೇಶ್ ಕುಮಾರ್, ಪರಿಷತ್ ಸದಸ್ಯರಾದ ಎನ್ ರವಿಕುಮಾರ್, ಪ್ರತಾಪ್ ಸಿಂಹ ನಾಯಕ್, ಶಾಂತರಾಮ್ ಬುಡ್ನಿ ಸಾಥ್ ನೀಡಿದ್ದಾರೆ.
ಬೆಂಗಳೂರು To ಮಂಗಳೂರು ರೈಲು ಸಂಚಾರ ಸ್ಥಗಿತ: ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ತೆರಳುವ ಭಕ್ತರಿಗೆ ಬಸ್ ದರ ಬಿಸಿ
ನನ್ನ ಮೇಲೆ ಆರೋಪ ಹಿಂಪಡೆಯಿರಿ ಇಲ್ಲವೇ ಸಿಬಿಐ ತನಿಖೆ ಕೊಡಿ ಎಂದು ಆಗ್ರಹಿಸಿ ಹೋರಾಟ ಭಿತ್ತಿ ಪತ್ರ ಪ್ರದರ್ಶನದ ಮೂಲಕ ಮೌನವಾಗಿ ಪ್ರತಿಭಟನೆ ನಡೆಸುತ್ತಿರುವ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ
ಭೋವಿ ನಿಗಮದಲ್ಲಿ ಭ್ರಷ್ಟಾಚಾರದ ಆರೋಪ ಮಾಡಿದ್ದ ಸಿಎಂ ಈ ಹಿಂದೆ ಹಿಂದುಳಿದ ವರ್ಗಗಳ ಇಲಾಖೆಯ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಇದ್ದಾಗ ಭ್ರಷ್ಟಾಚಾರ ಆಗಿದ್ದು ಎಂದು ಆರೋಪಿಸಿದ್ದ ಸಿಎಂ ಸಿದ್ದರಾಮಯ್ಯ ಸಿದ್ದರಾಮಯ್ಯ ಮಾತು ಖಂಡಿಸಿ ಕೋಟಾ ಹೋರಾಟ ನಡೆಸುತ್ತಿದ್ದಾರೆ. ಇದಕ್ಕೆ ಸಿಎಂ ಅವರು ಏನಾದರೂ ರಿಯಾಕ್ಟ್ ಮಾಡ್ತಾರಾ ಎಂದು ಕಾದು ನೋಡಬೇಕಿದೆ.