ವಿಜಯಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರಾವಧಿಯಲ್ಲಿ 40 ಸಾವಿರ ಕೋಟಿ ರು. ಕೋವಿಡ್ ಹಗರಣ ನಡೆದಿದೆ ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳರ ಆರೋಪ ಆಡಳಿತ ಮತ್ತು ಪ್ರತಿಪಕ್ಷ ನಡುವೆ ವಾಕ್ಸಮರಕ್ಕೆ ನಾಂದಿ ಹಾಡಿರುವ ನಡುವೆಯೇ,
ಈ ಕುರಿತು ರಾಜ್ಯ ಸರ್ಕಾರ ತನಿಖೆ ನಡೆಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲು ಹಾಕಿದ್ದಾರೆ. ಜತೆಗೆ, ಆರೋಪಕ್ಕೆ ಗುರಿಯಾಗಿರುವವರು ಯಡಿಯೂರಪ್ಪ ಅವರು ಎಂಬ ಮುಲಾಜೂ ನೋಡದೆ ತನಿಖೆ ನಡೆಯಲಿ ಎಂದು ಹೇಳಿದ್ದಾರೆ.
Bank Holidays: ಬ್ಯಾಂಕ್ ಗ್ರಾಹಕರೇ ಗಮನಿಸಿ.. 2024ರ ಜನವರಿಯಲ್ಲಿ ಬರೋಬ್ಬರಿ 16 ದಿನ ಬ್ಯಾಂಕ್ ರಜೆ!
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಆರೋಪದಲ್ಲಿ ಗಂಭೀರತೆ ಇದ್ದರೆ ಮಾತ್ರ ಅದಕ್ಕೆ ಪ್ರತಿಕ್ರಿಯಿಸಬೇಕು. ಆದರೆ ಯಡಿಯೂರಪ್ಪ ಅವರ ಮೇಲೆ ಯತ್ನಾಳ ಮಾಡಿರುವ ಕೋವಿಡ್ ಹಗರಣದ ಆರೋಪ ಸತ್ಯಕ್ಕೆ ದೂರವಾದದ್ದು. ಇಂಥ ಹುಡುಗಾಟಿಕೆ ಆರೋಪಗಳಿಗೆ ನಾನು ಪ್ರತಿಕ್ರಿಯೆ ಕೊಡಲ್ಲ. ಆರೋಪ ಮಾಡಿದವರು ಸೂಕ್ತ ದಾಖಲೆಗಳನ್ನೂ ಕೊಡಲಿ ಎಂದು ಯತ್ನಾಳ್ಗೆ ತಿರುಗೇಟು ನೀಡಿದರು.