ಮಂಡ್ಯ: ರಾಜ್ಯದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು, ಕೊಪ್ಪಳ, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಮಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.
ಅದರಂತೆ ಚನ್ನಪಟ್ಟಣ ನಗರಸಭೆ ಆಯುಕ್ತರ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ನಗರಸಭೆ ಆಯುಕ್ತ ನಾಗೇಶ್ ಅವರ ಶ್ರೀರಂಗಪಟ್ಟಣದ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ ನಡೆಸಿದ್ದಾರೆ.
ಕ್ಯಾರೆಟ್ ಬೆಳೆ ಹರಿಸುತ್ತೆ ಹಣದ ಹೊಳೆ: ಕ್ಯಾರೆಟ್ ಕೃಷಿ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ
ಈ ಹಿಂದೆ ಅವರು ಮಂಡ್ಯದ ಶ್ರೀರಂಗಪಟ್ಟಣದ ತಹಶಿಲ್ದಾರ್ ಆಗಿದ್ದರು. ತಹಶಿಲ್ದಾರ್ ಆಗಿದ್ದಾಗ ಶ್ರೀರಂಗಪಟ್ಟಣದ ಡಾಲರ್ಸ್ ಕಾಲೋನಿಯಲ್ಲಿ ಅಪಾರ್ಟ್ಮೆಂಟ್ ನಿರ್ಮಿಸಿದ್ದರು. ನಾಗೇಶ್ ಅಪಾರ್ಟ್ಮೆಂಟ್ ಪಕ್ಕದ ಬಾಡಿಗೆ ಮನೆ ಮೇಲೆ ಮೈಸೂರು ಲೋಕಾಯುಕ್ತ ಪೊಲೀಸರ ನೇತೃತ್ವದಲ್ಲಿ ದಾಳಿ ನಡೆದಿದ್ದು, ದಾಖಲೆ ಪರಿಶೀಲನೆ ನಡೆಸಿದ್ದಾರೆ.