ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ಕಳಪೆ ಬಿತ್ತನೆ ಬೀಜ ವಿತರಣೆ ಮಾಡಿದ್ದಾರೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ರೈತರು ಆಕ್ರೋಶ ಹೊರ ಹಾಕಿದ್ದಾರೆ.
ನೆಲಮಂಗಲ ಕೃಷಿ ಇಲಾಖೆಯಲ್ಲಿ ಕರ್ನಾಟಕ ರಾಜ್ಯ ಬೀಜ ನಿಗಮ ವಿತರಣೆ ಮಾಡಿದ ರಾಗಿ ಬಿತ್ತನೆ ಬೀಜ ರೈತರು ಖರೀದಿಸಿ MR-1 ಬಿತ್ತನೆ ರಾಗಿ ಖರೀದಿ ಮಾಡಿದ್ದರು.
ನೆಲಮಂಗಲ ತಾಲೂಕಿನ ಭಟ್ಟರಹಳ್ಳಿ ಗ್ರಾಮದಲ್ಲಿ ಬಿತ್ತನೆ ಕಾರ್ಯ ನಡೆದಿದೆ. ಪ್ರತಿ ಬ್ಯಾಗ್ ನಲ್ಲಿ ಕೃಷಿ ಇಲಾಖೆ ಕಳಪೆ ಬೀಜ ವಿತರಣೆ ಮಾಡಿದ್ದಾರೆ. ಹೀಗಾಗಿ ಕೃಷಿ ಇಲಾಖೆ ವಿರುದ್ದ ರೈತರು ಆಕ್ರೋಶ ಹೊರ ಹಾಕಿದ್ದಾರೆ.
ಸುಮಾರು 200 ಎಕರೆ ಪ್ರದೇಶದಲ್ಲಿ ರೈತರು ರಾಗಿ ಬಿತ್ತನೆ ಮಾಡಿದ್ದಾರೆ. ಮುಂಗಾರು ಮಳೆಗೆ ಉತ್ತಮ ಬೆಳೆ ಬೆಳೆಯುವ ನಿರೀಕ್ಷೆಯಲ್ಲಿದ್ದ ರೈತರಿಗೆ ಬಿಗ್ ಶಾಕ್ ಎದುರಾಗಿದೆ.